ಗೋಕಾಕ(ಬೆಳಗಾವಿ ಜಿಲ್ಲೆ): ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡುತ್ತೇವೆ. ಇದಕ್ಕಾಗಿ ನಾನು, ಶಾಸಕ ಬಸನಗೌಡ ಪಾಟೀಲ ಯತ್ನಾಳ ರೂಪುರೇಷೆ ಸಿದ್ಧಪಡಿಸುತ್ತೇವೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಅಕ್ರಮವಾಗಿ ಬೇನಾಮಿ ಖಾತೆಗಳಿಗೆ ವರ್ಗಾಯಿಸಿರುವ ಈ ಪ್ರಕರಣ ದೇಶದಲ್ಲೇ ದೊಡ್ಡದು. ಇದರ ವಿರುದ್ಧ ಮಾಡಲಿರುವ ಪಾದಯಾತ್ರೆಯಲ್ಲಿ ನಮ್ಮ ಪಕ್ಷದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಕಾಂಗ್ರೆಸ್ಗೆ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಈ ಹಗರಣ ಶೋಭೆ ತರುವುದಿಲ್ಲ. ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಸಿದ್ಧರಾಮಯ್ಯ ಈ ಪ್ರಕರಣದಲ್ಲಿ ಹೇಗೆ ಕಣ್ಣು ಮುಚ್ಚಿ ಕುಳಿತರು? ಇಂದು ಅವರ ದಯನೀಯ ಸ್ಥಿತಿ ನೋಡಿ ದುಃಖವಾಗುತ್ತಿದೆ’ ಎಂದು ಹೇಳಿದರು.

‘ಮುಡಾ ಹಗರಣದ ವಿರುದ್ಧ ಬಿಜೆಪಿಯ ನಾಯಕರು ಪಾದಯಾತ್ರೆಗೆ ಮುಂದಾಗಿದ್ದಾರೆ. ಆದರೆ, ಅದಕ್ಕೂ ಮೊದಲು ವಾಲ್ಮೀಕಿ ನಿಗಮದ ಹಗರಣ ಹಾಗೂ ಪರಿಶಿಷ್ಟರದ ಅನುದಾನ ದುರ್ಬಳಕೆ ವಿರುದ್ಧ ಪಾದಯಾತ್ರೆ ಮಾಡಲಿ’ ಎಂದರು.

ಸಿ.ಡಿ ಶಿವು ಎಂದು ಮರುನಾಮಕರಣ: ‘ಇತ್ತೀಚೆಗೆ ದೆಹಲಿಯಲ್ಲಿ ನಾನು ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದಾಗ, ಡಿ.ಕೆ.ಶಿವಕುಮಾರ್ ಅವರಿಗೆ ‘ಸಿ.ಡಿ ಶಿವು’ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ. ಈ ಹಿಂದೆ ಡಿಕೆಶಿಯನ್ನು ‘ಮಹಾನ್ ನಾಯಕ’ ಎಂದು ಟೀಕಿಸುತ್ತಿದ್ದೆ. ಆದರೆ, ಆ ಶಬ್ದದ ಅಪಾರ್ಥವಾಗಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದಂತಾಗುತ್ತಿತ್ತು’ ಎಂದು ಹೇಳಿದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುವುದು, ಬಿಡುವುದು ಆ ಪಕ್ಷದವರ ಆಂತರಿಕ ವಿಷಯ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಗಳಿಸಲು ಸಿದ್ದರಾಮಯ್ಯ ಅವರೇ ಕಾರಣ. ಕೆಲವರು ಎದೆಯುಬ್ಬಿಸಿ, ಈ ಸರ್ಕಾರ ರಚನೆಯಲ್ಲಿ ನನ್ನ ಪಾತ್ರವೂ ಇದೆ ಎನ್ನುತ್ತಿದ್ದಾರೆ’ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.