ಬೆಳಗಾವಿ: ‘ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ, ನಗರದ ಹೋಟೆಲ್‌ವೊಂದರ ತಿನಿಸಿನ ಪೋಸ್ಟ್‌ನಲ್ಲಿ ಸಾಧು–ಸಂತರಿಗೆ ಅಪಮಾನ ಮಾಡಲಾಗಿದೆ. ಸಂಬಂಧಿಸಿದ ಹೋಟೆಲ್‌ನವರು 24 ಗಂಟೆಯೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಹೋಟೆಲ್‌ನವರೆ ಹೊಣೆ ಆಗಬೇಕಾಗುತ್ತದೆ’ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಡಿಸಿಪಿ ಕಚೇರಿಗೆ ಗುರುವಾರ ಮನವಿ ಸಲ್ಲಿಸಿರುವ ಅವರು, ‘ಹೋಟೆಲ್‌ವೊಂದು ಬಿರಿಯಾನಿಯ ಜಾಹೀರಾತನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಸಾಧು-ಸಂತರನ್ನು ಅಪಮಾನಿಸಲಾಗಿದೆ. ಇದು ಸರಿಯಲ್ಲ’ ಎಂದು ತಿಳಿಸಿದರು.

ಹೋಟೆಲ್ ಬಳಿಯೇ ಆಕ್ಷೇಪ ವ್ಯಕ್ತಪಡಿಸಿದ ಕಾರ್ಯಕರ್ತರು ನಂತರ ಡಿಸಿಪಿ ಕಚೇರಿಗೆ ಬಂದು ಮನವಿ ಸಲ್ಲಿಸಿದರು.

ಬಜರಂಗ ದಳದ ಬೆಳಗಾವಿ ವಿಭಾಗದ ಸಂಯೋಜಕ ಸದಾಶಿವ ಗುದಗಗೋಳ, ಜಿಲ್ಲಾ ಸಂಯೋಜಕ ಬಾವಕಣ್ಣ ಲೋಹಾರ, ಆದಿನಾಥ ಗಾವಡೆ, ವಿಎಚ್‌ಪಿ ಜಿಲ್ಲಾ ಘಟಕದ ಕಾರ್ಯದರ್ಶಿ ವಿಜಯ ಜಾಧವ ಮತ್ತು ಸುನಿಲ್ ಕನೇರಿ ಇದ್ದರು.

ಹೋಟೆಲ್ ಬಂದ್ ಮಾಡಲಾಗಿದೆ. ಹೋಟೆಲ್ ಮಾಲೀಕರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.