ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: 18ರಂದು ವಿಟಿಯು ಘಟಿಕೋತ್ಸವ

Published 15 ಜುಲೈ 2024, 22:00 IST
Last Updated 15 ಜುಲೈ 2024, 22:00 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) 24ನೇ ವಾರ್ಷಿಕ ಘಟಿಕೋತ್ಸವ ಜುಲೈ 18ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದ್ದು, ಮೂವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು’ ಎಂದು ವಿಟಿಯು ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ತಿಳಿಸಿದರು.

ಚಿಕ್ಕಬಳ್ಳಾಪುರದ ಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸದ್ಗುರು ಮಧುಸೂದನ್‌ ಸಾಯಿ, ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಎಸ್‌.ಸೋಮನಾಥ್‌ ಸೇರಿದಂತೆ ಮೂವರಿಗೆ ‘ಡಾಕ್ಟರ್‌ ಆಫ್‌ ಸೈನ್ಸ್‌’ ಪ್ರದಾನ ಮಾಡಲಾಗುವುದು. ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಪಾಲ್ಗೊಳ್ಳುವರುಎಂದು ಅವರು ತಿಳಿಸಿದರು. 

ಸಾಹಿಲ್‌ಗೆ 12 ಚಿನ್ನದ ಪದಕ

ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಎಂ.ಎಸ್‌.ಶೇಷಗಿರಿ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್‌ ವಿಭಾಗದ ಸಾಹಿಲ್‌ ಸೋಮನಾಚೆ 12 ಚಿನ್ನದ ಪದಕ ಗಳಿಸಿದ್ದಾರೆ. ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಜಿ.ವಿಷ್ಣುಪ್ರಿಯಾ 10 ಬೆಂಗಳೂರಿನ ಎಸ್‌ಜೆಬಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯುನಿಕೇಷನ್ಸ್‌ ವಿಭಾಗದ ಜಿ.ರೇಷ್ಮಾ ಇದೇ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಎಲ್‌.ಮೋಹನಕುಮಾರ್‌ ಬಳ್ಳಾರಿಯ ಬಳ್ಳಾರಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಅಂಡ್‌ ಮ್ಯಾನೇಜ್‌ಮೆಂಟ್‌ನ ಎಲೆಕ್ಟ್ರಿಕಲ್‌ ಅಂಡ್‌ ಎಲೆಕ್ಟ್ರಾನಿಕ್ಸ್‌ ವಿಭಾಗದ ಜಿ.ಹೃತಿಕಾ ಅವರು ತಲಾ 7 ಚಿನ್ನದ ಪದಕ ಗಳಿಸಿದ್ದಾರೆ. ಬೆಂಗಳೂರಿನ ಏಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಕೃತಿಕಾ ಸೆಂಥಿಲ್‌ ಆರ್‌ಎನ್‌ಎಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪಿ.ಅನುಶ್ರೀ ತಲಾ 4 ಕೆಜಿಎಫ್‌ನ ಡಾ.ಟಿ.ತಿಮ್ಮಯ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಎನ್‌.ಮಾಲತೇಶ ದಾವಣಗೆರೆಯ ಜಿ.ಎಂ. ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಡಿ.ಜನನಿ ಮತ್ತು ಮಂಗಳೂರಿನ ಶ್ರೀದೇವಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಸೌರವ್‌ ಇಂಗಳೆ ತಲಾ 2 ಚಿನ್ನದ ಪದಕ ಪಡೆದಿದ್ದಾರೆ ಎಂದು ವಿವರಿಸಿದರು. ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಮಂಗಳೂರಿನ ಸಹ್ಯಾದ್ರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್‌ ಸ್ನಾತಕ ವಿಭಾಗದಲ್ಲಿ ತಲಾ 19 ರ್‍ಯಾಂಕ್‌ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT