ಬೆಳಗಾವಿ: ‘ಬಿಜೆಪಿ ಶಾಸಕ ಮುನಿರತ್ನ ಬಂಧಿಸಲು ನಾವು ಯಾವುದೇ ದ್ವೇಷದ ರಾಜಕಾರಣ ಮಾಡಿಲ್ಲ. ಮುನಿರತ್ನ ಅವರನ್ನು ಏಕೆ ಬಂಧಿಸಲಾಗಿದೆ ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಇದಕ್ಕೆ ಕನ್ನಡಿ ಹಿಡಿಯಬೇಕಾದ ಅಗತ್ಯವಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

‘ಮುನಿರತ್ನ ಬಂಧಿಸಲು ಕಾಂಗ್ರೆಸ್‌ನವರ ದ್ವೇಷ ರಾಜಕಾರಣವೇ ಕಾರಣ’ ಎಂಬ ಬಿಜೆಪಿಯವರ ಆರೋಪಕ್ಕೆ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

‘ಮುನಿರತ್ನ ಬಂಧಿಸಲು ಯಾರು ದ್ವೇಷದ ರಾಜಕಾರಣ ಮಾಡುತ್ತಾರೆ? ಬೈಯಿರಿ ಅಥವಾ ಬ್ಲ್ಯಾಕ್‌ಮೇಲ್ ಮಾಡಿ ಎಂದು ಕಾಂಗ್ರೆಸ್ ನಾಯಕರು ಅವರಿಗೆ ಹೇಳಿದ್ದಾರಾ? ಮಾಡಿದ್ದುಣ್ಣೋ ಮಾರಾಯ ಎನ್ನುವ ಸ್ಥಿತಿ ಅವರದ್ದಾಗಿದೆ’ ಎಂದು ದೂರಿದರು.

‘ಮಹಿಳೆಯರ ಬಗ್ಗೆ ಮುನಿರತ್ನ ಆಡಿದ ಕೀಳು ಮಾತುಗಳನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳನ್ನು ಯಾರೂ ಕೂಡ ಆಡಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.