ಹೊಸಪೇಟೆ: ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪನವರು ಗುರುವಾರ ನಗರದ ಮೇಜಾರ್‌ನಲ್ಲಿ ಪ್ರಚಾರ ಕೈಗೊಂಡರು.

ವಡಕರಾಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೇನ್ ಬಜಾರ್‌ನ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ಮತಯಾಚಿಸಿದರು.

‘ಐದು ವರ್ಷಗಳಲ್ಲಿ ಮೋದಿಯವರು ಉತ್ತಮ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಅವರು ಪ್ರಧಾನಿಯಾಗುವುದು ಖಚಿತ. ಜಿಲ್ಲೆಯ ಜನ ನನ್ನನ್ನು ಗೆಲ್ಲಿಸಿ, ಮೋದಿಯವರ ಕೈ ಬಲಪಡಿಸಬೇಕು’ ಎಂದು ದೇವೇಂದ್ರಪ್ಪ ಮನವಿ ಮಾಡಿದರು.

ಮುಖಂಡ ಮೃತ್ಯುಂಜಯ ಜಿನಗಾ ಮಾತನಾಡಿ, ‘ಮೋದಿಯವರ ಆಡಳಿತದ ಅವಧಿಯಲ್ಲಿ ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಮನ್ನಣೆ ಸಿಕ್ಕಿದೆ. ಅಲ್ಲದೇ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಹಿಂದಿನ ಸರ್ಕಾರ ಮಾಡದ ಕೆಲಸವನ್ನು ಅವರು ಮಾಡಿ ತೋರಿಸಿದ್ದಾರೆ. ಶುದ್ಧ ಆಡಳಿತ ನೀಡಿದ್ದಾರೆ’ ಎಂದು ಹೇಳಿದರು.

ಮುಖಂಡರಾದ ವೈ. ಯಮುನೇಶ, ಬಸವರಾಜ ನಾಲತ್ವಾಡ, ಭರಮನಗೌಡ, ಪಂಚಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.