ಹೊಸಪೇಟೆ (ವಿಜಯನಗರ): ವಾರಾಂತ್ಯದ ಕರ್ಫ್ಯೂ ಅವಧಿ ಮುಗಿಯುತ್ತಿದ್ದಂತೆ ಸೋಮವಾರ ಬೆಳಿಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಜನದಟ್ಟಣೆ ಕಂಡು ಬಂತು.

ಶನಿವಾರ ಹಾಗೂ ಭಾನುವಾರ ಬೆಳಿಗ್ಗೆ ಆರರಿಂದ ಹತ್ತು ಗಂಟೆಯ ವರೆಗೆ ಅಗತ್ಯ ವಸ್ತು ಖರೀದಿಸಲಷ್ಟೇ ಅವಕಾಶ ಇತ್ತು. ಎಲ್ಲ ರೀತಿಯ ವಾಣಿಜ್ಯ ವಹಿವಾಟು ಕೂಡ ಸ್ಥಗಿತಗೊಂಡಿತ್ತು. ಆದರೆ, ಸೋಮವಾರ ಕರ್ಫ್ಯೂ ಮುಗಿಯುತ್ತಿದ್ದಂತೆ ಜನ ಸಾಕಷ್ಟು ಸಂಖ್ಯೆಯಲ್ಲಿ ಹೊರಗೆ ಕಾಣಿಸಿಕೊಂಡರು.

ನಗರದಲ್ಲಿ ಆರಂಭಿಸಲಾಗಿರುವ ಆರು ತಾತ್ಕಾಲಿಕ ಮಾರುಕಟ್ಟೆ, ಮಾಂಸದ ಅಂಗಡಿ, ದಿನಸಿ ಅಂಗಡಿಗಳಲ್ಲಿ ಹೆಚ್ಚಿನ ಜನ ಕಾಣಿಸಿಕೊಂಡರು. ಕಟ್ಟಡ ನಿರ್ಮಾಣ ಕಾರ್ಮಿಕರು, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು, ದೈನಂದಿನ ಕಚೇರಿ ಕೆಲಸಕ್ಕೆ ಜನ ತೆರಳಿದರು.

ಇನ್ನು, ನಗರದ ತಾಲ್ಲೂಕು ಕಚೇರಿ, ನಗರಸಭೆಯ ಆವರಣದಲ್ಲೂ ಜನ ಕಂಡು ಬಂದರು. ಆಸ್ತಿ ನೋಂದಣಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹೀಗೆ ಇತರೆ ಕಚೇರಿ ಕೆಲಸಕ್ಕಾಗಿ ಗ್ರಾಮೀಣ ಪ್ರದೇಶಗಳಿಂದ ಜನ ಬಂದಿದ್ದರು. ಮಧ್ಯಾಹ್ನ ಬಿಸಿಲು ಏರುತ್ತಿದ್ದಂತೆ ಜನರ ಓಡಾಟ ನಿಧಾನವಾಗಿ ಕಡಿಮೆಯಾಯಿತು. ಪ್ರಮುಖ ರಸ್ತೆಗಳಲ್ಲಿ ವಾಹನಗಳ ಓಡಾಟ ತಗ್ಗಿತು. ಬಟ್ಟೆ ಅಂಗಡಿಗಳನ್ನು ತೆರೆಯಲು ಪೊಲೀಸರು ಅವಕಾಶ ಕಲ್ಪಿಸಲಿಲ್ಲ.

ಮಂಗಳವಾರ (ಏ.27) ರಾತ್ರಿಯಿಂದ 14 ದಿನಗಳ ವರೆಗೆ ಲಾಕ್‌ಡೌನ್ ಘೋಷಿಸಿರುವ ಸುದ್ದಿ ಸೋಮವಾರ ಮಧ್ಯಾಹ್ನ ಹೊರಬೀಳುತ್ತಿದ್ದಂತೆ ಜನ ಅಗತ್ಯ ವಸ್ತುಗಳ ಖರೀದಿಗೆ ಪುನಃ ಮಾರುಕಟ್ಟೆ, ಅಂಗಡಿಗಳತ್ತ ದೌಡಾಯಿಸಿದರು. ಎರಡು ವಾರಕ್ಕೆ ಸಾಕಾಗುವಷ್ಟು ದಿನಸಿ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಿ ಕೊಂಡೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.