ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ಮೂರು ತಿಂಗಳ ವೇತನವನ್ನು ಇದೇ 16ರ ಸಂಜೆಯೊಳಗೆ ಪಾವತಿಸಬೇಕು. ಇಲ್ಲವಾದಲ್ಲಿ ಸೇವೆ ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ‘108-ಆರೋಗ್ಯ ಕವಚ’ ಯೋಜನೆಯಡಿಯ ಆಂಬುಲೆನ್ಸ್ ಸಿಬ್ಬಂದಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಯೋಜನೆಯನ್ನು ಜಿವಿಕೆ–ಇಎಂಆರ್ಐ ಸಂಸ್ಥೆ ನಿರ್ವಹಿಸುತ್ತಿದ್ದು, 2,500 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ವೇತನವನ್ನು ಸಂಸ್ಥೆ ಪಾವತಿಸಿಲ್ಲ’ ಎಂದು ಆರೋಪಿಸಿರುವ ಸಿಬ್ಬಂದಿ, ನಿಗದಿತ ಗಡುವಿನೊಳಗೆ ವೇತನ ಪಾವತಿಯಾಗದಿದ್ದಲ್ಲಿ ನ.16ರ ರಾತ್ರಿ 8 ಗಂಟೆಯಿಂದ ಸೇವೆ ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಚ್ಚರಿಸಿದ್ದಾರೆ.

‘ನಿಯಮಿತವಾಗಿ ವೇತನ ನೀಡದಿದ್ದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಮುಷ್ಕರ ಅನಿವಾರ್ಯವಾಗಿದೆ’ ಎಂದು 108 ನೌಕರರ ಸಂಘದ ಸದಸ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.