ಬೆಂಗಳೂರು: ಬೆಳ್ಳಂದೂರು ಕೆರೆ ಹಾಗೂ ವರ್ತೂರು ಕೆರೆಗಳ ಅಭಿವೃದ್ಧಿ ಕಾರ್ಯವನ್ನು 2022ರ ನವೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಅಧಿಕಾರಿಗಳಿಗೆ ಗಡುವು ವಿಧಿಸಿದರು.

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಮತ್ತು ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರ ಜೊತೆಗೆ ಬಿಡಿಎ ಅಧ್ಯಕ್ಷರು ಬೆಳ್ಳಂದೂರು ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದರು.

ಬೆಳ್ಳಂದೂರು ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸಲು ಬಿಡಿಎ ₹ 100 ಕೋಟಿ ವೆಚ್ಚ ಮಾಡುತ್ತಿದೆ. ಇನ್ನಷ್ಟು ಯಂತ್ರೋಪಕರಣಗಳನ್ನು ಬಳಸಿ ಮತ್ತು ಮಾನವ ಸಂಪನ್ಮೂಲ ಹೆಚ್ಚಿಸಿಕೊಂಡು ನಿಗದಿತ ಸಮಯದೊಳಗೆ ಕಾಮಗಾರಿ ಸುರುಕುಗೊಳಿಸುವಂತೆ ಬಿಡಿಎ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ವಿಶ್ವನಾಥ್ ನಿರ್ದೇಶನ ನೀಡಿದರು.

ದೊಡ್ಡಬನಹಳ್ಳಿಯ ಬಿಡಿಎ ವಸತಿ ಸಂಕೀರ್ಣಗಳಿಗೆ ಭೇಟಿ ನೀಡಿದ ಅಧ್ಯಕ್ಷರು, ಅಲ್ಲಿನ ನಿವಾಸಿಗಳಿಂದ ಅಹವಾಲುಗಳನ್ನು ಸ್ವೀಕರಿಸಿದರು. ‘ಬಿಡಿಎ ನಿರ್ಮಿಸಿರುವ ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ತೆರೆದ ವ್ಯಾಯಾಮ ಶಾಲೆ ನಿರ್ಮಿಸಿ, ಸಕಲ ಮೂಲಸೌಕರ್ಯ ಕಲ್ಪಿಸಲಾಗುತ್ತದೆ. ಮಕ್ಕಳ ಆಟೋಟಗಳಿಗೆ ಪ್ರತ್ಯೇಕ ಸ್ಥಳವನ್ನು ಕಲ್ಪಿಸಲಾಗುತ್ತದೆ’ ಎಂದು ಭರವಸೆ ನೀಡಿದರು.

ಗುಂಜೂರು: ಸಮಸ್ಯೆ ನಿವಾರಣೆಗೆ ಆ.15 ಗಡುವು

ಗುಂಜೂರಿನಲ್ಲಿ ಬಿಡಿಎ ನಿರ್ಮಿಸಿರುವ ವಸತಿ ಸಂಕೀರ್ಣದ ನಿವಾಸಿಗಳ ಅಹವಾಲುಗಳನ್ನು ವಿಶ್ವನಾಥ್ ಆಲಿಸಿದರು. ‘ಕಟ್ಟಡಕ್ಕೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವುದು, ಆವರಣ ಗೋಡೆ ನಿರ್ಮಾಣವನ್ನು ಬೇಗ ಪೂರ್ಣಗೊಳಿಸಬೇಕು. ಕಸ ವಿಲೇವಾರಿ ಸಮಸ್ಯೆಗಳನ್ನು ಆ.15 ರೊಳಗೆ ಪೂರ್ಣಗೊಳಿಸಬೇಕು’ ಎಂದು ಗುತ್ತಿಗೆದಾರರಿಗೆ ಗಡುವು ವಿಧಿಸಿದರು.

ಕಾಮಗಾರಿಗಳಲ್ಲಿ ವಿಳಂಬವಾದರೆ ಮತ್ತು ಲೋಪಗಳು ಕಂಡು ಬಂದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅಪಾರ್ಟ್ಮೆಂಟ್ ಸಮುಚ್ಚಯದ ಕುಡಿಯುವ ನೀರು ಪೂರೈಕೆ ಸಮಸ್ಯೆ ಬಗೆಹರಿಸಲು ಎರಡು ಕೊಳವೆಬಾವಿ ಕೊರೆಯಿಸುವುದಾಗಿ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.