ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ (ಐಸಿಡಿಎಸ್)ಅನುದಾನ ಹೆಚ್ಚಿಸುವಂತೆ ಹಾಗೂ ಅಂಗನವಾಡಿ ನೌಕರರಿಗೆ ₹31 ಸಾವಿರ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಅಂಗನವಾಡಿ, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರಿಗೆ ನಿವೃತ್ತಿ ಸೌಲಭ್ಯಗಳು ಹಾಗೂ ₹10 ಸಾವಿರ ಪಿಂಚಣಿ ನೀಡಬೇಕು. ಸ್ಕೀಮ್ ಯೋಜನೆಗಳಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ, ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಅಂಗನವಾಡಿ ಕೇಂದ್ರಗಳಾಗಿ ಪರಿವರ್ತಿ ಸಬೇಕು. ಮೂರುರಿಂದ ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

‘2022 ಏಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ ಎಲ್ಲ ಅಂಗನವಾಡಿ ನೌಕರರನ್ನು ಉದ್ಯೋಗಸ್ಥರೆಂದು ಪರಿಗಣಿಸಿ ಗ್ರಾಚ್ಯುಟಿ ಕಾಯ್ದೆಯನ್ನು ಜಾರಿಗೊಳಿಸಬೇಕು. ದೇಶದಲ್ಲಿ ಎಲ್ಲ ಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿರುವ ಕೂಸಿನ ಮನೆಯನ್ನು ರದ್ದುಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.