ಗುರುವಾರ, 27 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾನೂನು ಬಾಹಿರ ಚಟುವಟಿಕೆ: 310 ಮಂದಿ ಬಂಧನ

Published 14 ಫೆಬ್ರುವರಿ 2024, 0:19 IST
Last Updated 14 ಫೆಬ್ರುವರಿ 2024, 0:19 IST
ಅಕ್ಷರ ಗಾತ್ರ

ಬೆಂಗಳೂರು: ‘ಡ್ರಗ್ಸ್ ಸಾಗಣೆ ಹಾಗೂ ಮಾರಾಟ, ಜೂಜಾಟ, ಮಟ್ಕಾ ಸೇರಿದಂತೆ ವಿವಿಧ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದವರ ವಿರುದ್ಧ ಜನವರಿ ತಿಂಗಳಿನಲ್ಲಿ 140 ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, 310 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಪರಾಧ ಹಿನ್ನೆಲೆಯುಳ್ಳ 164 ಮಂದಿ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಪ್ರಕರಣ ದಾಖಲಿಸಿ, ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು. ಈ ಪೈಕಿ ಮೂವರು ಮುಚ್ಚಳಿಕೆ ನಿಯಮ ಉಲ್ಲಂಘಿಸಿದ್ದು, ಬಾಂಡ್ ಮೌಲ್ಯದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದರು.

‘ನ್ಯಾಯಾಲಯಗಳಲ್ಲಿ ಜನವರಿಯಲ್ಲಿ 1,308 ಪ್ರಕರಣಗಳ ವಿಚಾರಣೆ ಮುಕ್ತಾಯವಾಗಿದ್ದು, 762 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ಆಗಿದೆ. ಕೊರಿಯರ್ ಹಾಗೂ ಪಾರ್ಟ್‌ಟೈಂ ಕೆಲಸದ ಹೆಸರಿನಲ್ಲಿ ಆಗಿದ್ದ ಸೈಬರ್ ವಂಚನೆಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT