ಬೆಂಗಳೂರು: ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 3,319 ಮಂದಿ ಹೃದಯ ಮತ್ತು ಶ್ವಾಸಕೋಶ ಕಾಯಿಲೆಯ ಪ್ರಾಥಮಿಕ ಚಿಕಿತ್ಸೆಯ (ಸಿಪಿಆರ್) ಬಗ್ಗೆ ಪ್ರಾತ್ಯಕ್ಷಿಕೆ ನೀಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ.

ವಿಶ್ವ ಹೃದಯ ದಿನದ ಪ್ರಯುಕ್ತ ಆಸ್ಪತ್ರೆಯು ‘ವಿಷನ್ 3ಕೆ–3,000 ಹಾರ್ಟ್ಸ್, ಒನ್ ಬೀಟ್’ ಶೀರ್ಷಿಕೆಯಡಿ ಸಿಪಿಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಸಿಪಿಆರ್ ಬಗ್ಗೆ ತರಬೇತಿ ಹೊಂದಿದ್ದವರು ನಿರಂತರ 24 ಗಂಟೆ ಪ್ರಾತ್ಯಕ್ಷಿಕೆ ನೀಡಿದ್ದಾರೆ. ಮಾನವಾಕೃತಿಯ ಮಾದರಿಯ ಮೇಲೆ ಸಿಪಿಆರ್ ಪ್ರಕ್ರಿಯೆ ನಡೆಸಲು ಪ್ರತಿಯೊಬ್ಬರಿಗೆ 30 ಸೆಕೆಂಡ್ ಕಾಲಾವಕಾಶ ನೀಡಲಾಗಿತ್ತು. ಈ ಹಿಂದೆ 2,619 ಮಂದಿ 24 ಗಂಟೆಗಳ ಅವಧಿಯಲ್ಲಿ ಸಿಪಿಆರ್ ಪ್ರಾತ್ಯಕ್ಷಿಕೆ ನೀಡಿದ್ದರು.

‘ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡಲು ಸಿಪಿಆರ್ ಸಹಾಯಕ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ಇದನ್ನು ಯಾವ ರೀತಿ ಬಳಸಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ. ನಿಂತಿರುವ ಹೃದಯ ಬಡಿತವನ್ನು ಪುನಃ ಪ್ರಾರಂಭವಾಗುವಂತೆ ಮಾಡುವ ಪ್ರಕ್ರಿಯೆಯೇ ಸಿಪಿಆರ್’ ಎಂದು ಮಣಿಪಾಲ್ ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ.

‘ಹೃದಯಾಘಾತ ಅಥವಾ ಹೃದಯ ಸ್ತಂಭನ ಉಂಟಾದಾಗ ತಕ್ಷಣ ತುರ್ತು ಚಿಕಿತ್ಸೆ ಒದಗಿಸದಿದ್ದಲ್ಲಿ ಜೀವಕ್ಕೆ ಅಪಾಯ ಆಗಲಿದೆ. ಆದ್ದರಿಂದ ಸಿಪಿಆರ್ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕಿದೆ. ಸಿಪಿಆರ್ಗೆ ಸಂಬಂಧಿಸಿದ ಪ್ರಾತ್ಯಕ್ಷೆಯಲ್ಲಿ 30ಕ್ಕೂ ಹೆಚ್ಚು ನರ್ಸಿಂಗ್ ಕಾಲೇಜುಗಳು ಒಟ್ಟಾಗಿ ಕೆಲಸ ಮಾಡಿವೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.