ಬೆಂಗಳೂರು: ನ್ಯಾಷನಲ್ ಎಜುಕೇಷನ್ ಫೌಂಡೇಷನ್ ಹಾಗೂ ಬ್ರಿಲ್ಲಿಯೊ ಸಹಯೋಗದಲ್ಲಿ ನಡೆಯುತ್ತಿರುವ ನಾಲ್ಕನೇ ರಾಷ್ಟ್ರೀಯ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಗಣಿತ) ಚಾಲೆಂಜ್ ಅಂತಿಮ ಸುತ್ತಿನ ಸ್ಪರ್ಧೆ ಬನಶಂಕರಿಯ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ (ಆಗಸ್ಟ್ 27) ನಡೆಯಲಿದೆ.

ಈ ವರ್ಷದ ಸ್ಪರ್ಧೆಯಲ್ಲಿ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಂತಿಮ ಸುತ್ತಿಗೆ ದೇಶದ ವಿವಿಧ ಭಾಗಗಳಿಂದ ಒಟ್ಟು 60 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇವರು ಸ್ಟೆಮ್ ವಿಭಾಗದಲ್ಲಿ ತಮ್ಮ ಕೌಶಲ, ಅನ್ವೇಷಣೆ ಹಾಗೂ ಕ್ರಿಯಾಶೀಲತೆ ಪ್ರದರ್ಶಿಸಲಿದ್ದಾರೆ.

ಬ್ರಿಲ್ಲಿಯೊ ಕಂಪನಿಯು ತಮ್ಮ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದ ಭಾಗವಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಈ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಈ ಕಂಪನಿ ಸಹಯೋಗದಲ್ಲಿ ನ್ಯಾಷನಲ್ ಎಜುಕೇಷನ್ ಫೌಂಡೇಷನ್ ಈ ಕಾರ್ಯಕ್ರಮದ ಆತಿಥ್ಯ ವಹಿಸಲಿದೆ.

ಈ ಕುರಿತು ಮಾಹಿತಿ ನೀಡಿರುವ ನ್ಯಾಷನಲ್ ಎಜುಕೇಷನ್ ಫೌಂಡೇಷನ್‌ನ ಐಶ್ವರ್ಯ ಡಿಕೆಎಸ್ ಹೆಗ್ಡೆ, ‘ರಾಷ್ಟ್ರೀಯ ಸ್ಟೆಮ್ ಚಾಲೆಂಜ್ ಸ್ಪರ್ಧೆಯು ನಮ್ಮ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿರುವ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡಲಿದೆ. ಅಲ್ಲದೆ, ಅತ್ಯುತ್ತಮ ಶಿಕ್ಷಣ ನೀಡುವ ನಮ್ಮ ಧ್ಯೇಯ ಸಾಧನೆಗೆ ಪೂರಕವಾಗಿದೆ. ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಕಲಿಯಲು, ಬೆಳೆಯಲು ಹಾಗೂ ತಮ್ಮ ಪ್ರತಿಭೆ ಅನಾವರಣಗೊಳಿಸಲು ಹೆಚ್ಚಿನ ಅವಕಾಶ ಕಲ್ಪಿಸಿ ಸಶಕ್ತರನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.