‘ರಾಜ್ಯದ ಒಟ್ಟು ಜನಸಂಖ್ಯೆಯ ನಾಲ್ಕನೇ ಒಂದು ಭಾಗದಷ್ಟು ಜನರು ಬೆಂಗಳೂರಿನಲ್ಲಿದ್ದಾರೆ. ಅವರಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ. ಅದಕ್ಕಾಗಿ ಆಸ್ತಿ ತೆರಿಗೆಯಲ್ಲಿನ ಸೋರಿಕೆಯನ್ನು ಸರಿಪಡಿಸಲಾಗುತ್ತಿದೆ. ಕೆಲವು ಯೋಜನೆಗಳನ್ನು ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾಡಲಾಗುವುದು. ಉಳಿದ ಮೊತ್ತವನ್ನು ಬಾಹ್ಯ ಸಾಲದ ಮೂಲಕ ಭರಿಸಲಾಗುವುದು’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.