ಬೆಂಗಳೂರು: ಮನೆಯ ಮುಂದೆ ಮೊಬೈಲ್ ನೋಡುತ್ತಾ ಕುಳಿತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರ ಎರಡೂ ಕಾಲುಗಳು ಜಖಂಗೊಂಡಿರುವ ಘಟನೆ ಮಂಜುನಾಥನಗರದಲ್ಲಿ ನಡೆದಿದೆ.

ಖಾಸಗಿ ಕಂಪನಿ ಉದ್ಯೋಗಿ ಆಗಿರುವ ಮಂಜುನಾಥ್ (40) ಅವರು ತಮ್ಮ ಮನೆಯ ಮುಂದಿನ ಮರದ ಕೆಳಗಿರುವ ಕಟ್ಟೆಯಲ್ಲಿ ಕುಳಿತು ಮೊಬೈಲ್ ನೋಡುತ್ತಿದ್ದರು. ಸಂಜೆ 4.30ರ ವೇಳೆ ಅದೇ ರಸ್ತೆಯಲ್ಲಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.

ಈ ಘಟನೆಯ ದೃಶ್ಯ ಮನೆ ಮುಂದಿನ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತೀವ್ರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಅವರ ಎರಡೂ ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳೀಯ ನಿವಾಸಿಯಾಗಿರುವ ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯನಗರ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.