ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಪಣ್ಣ ಆಯೋಗ ವರದಿ ಬಹಿರಂಗಕ್ಕೆ ಎಎಪಿ ಆಗ್ರಹ

Published : 4 ಅಕ್ಟೋಬರ್ 2024, 19:46 IST
Last Updated : 4 ಅಕ್ಟೋಬರ್ 2024, 19:46 IST
ಫಾಲೋ ಮಾಡಿ
Comments

ಬೆಂಗಳೂರು: ‘ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತು ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು’ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

‘ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿಕೊಂಡಿದ್ದ ಜಮೀನುಗಳ ಡಿನೋಟಿಫಿಕೇಷನ್‌ನಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಒಟ್ಟು 880 ಎಕರೆ ರೀಡೂ ಮಾಡಲಾಗಿದೆ. ಇದರ ಮೌಲ್ಯ ಅಂದಾಜು ₹8 ಸಾವಿರ ಕೋಟಿ ಇದೆ. 2014ರಲ್ಲಿ ಸಿದ್ದರಾಮಯ್ಯ ಅವರು ಕೆಂಪಣ್ಣ ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದ್ದರು. ಕೆಂಪಣ್ಣ ಅವರು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಹಲವು ವರ್ಷಗಳೇ ಕಳೆದರೂ ಅದು ಇನ್ನೂ ಬಹಿರಂಗ
ವಾಗಿಲ್ಲ’ ಎಂದು ದೂರಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT