ಬೆಂಗಳೂರು: ‘ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟಾಚಾರ ಪ್ರಕರಣಗಳು, ಪ್ರಾಸಿಕ್ಯೂಷನ್ ಅನುಮತಿ ನೀಡುವ ವಿಚಾರದಲ್ಲಿನ ಲೋಪದಿಂದಾಗಿ ನ್ಯಾಯಾಲಯಗಳಲ್ಲಿ ವಜಾ ಆಗುತ್ತಿವೆ’ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಲೋಕಾಯುಕ್ತ ಹಾಗೂ ರಾಜ್ಯ ಸರ್ಕಾರ ಭ್ರಷ್ಟರಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗುತ್ತಿವೆ. ಇದರಿಂದ, ಲೋಕಾಯುಕ್ತ ನ್ಯಾಯಾಲಯದಲ್ಲಿ ಹಲವಾರು ಪ್ರಕರಣಗಳು ಬಾಕಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ, ಲೋಕಾಯುಕ್ತದಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳ ಆರೋಪಪಟ್ಟಿ ಸಲ್ಲಿಸಲು ಒಪ್ಪಿಗೆ ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

‘ಮಾಡಾಳ್ ವಿರೂಪಾಕ್ಷಪ್ಪ ಮತ್ತು ದೇವೇಂದ್ರಪ್ಪ ಅವರ ಪ್ರಕರಣಗಳನ್ನು ಮರು ತನಿಖೆಗೆ ಒಪ್ಪಿಸಿ, ಅವರ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು. ಬಿಜೆಪಿ ಆಡಳಿತದಲ್ಲಿ ಆಗಿರುವ ಎಲ್ಲ ಹಗರಣಗಳನ್ನೂ ಈಗ ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿದೆ. ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರ ಬಗ್ಗೆ ಗೌರವವಿದ್ದರೆ, ಬಿಜೆಪಿ ನಾಯಕರು ನಡೆಸಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.