ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಆಗಿರುವ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಗೊಳಿಸುವಂತೆ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆಗ್ರಹಿಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಎಎಪಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು, ‘ಮಹದಾಯಿ ನ್ಯಾಯಾಧೀಕರಣದಿಂದ 2018ರ ಆಗಸ್ಟ್ 14ರಂದು ತೀರ್ಪು ಪ್ರಕಟವಾಗಿದೆ. ತೀರ್ಪಿನಲ್ಲಿ 13.42 ಟಿಎಂಸಿ ಅಡಿ ನೀರು ರಾಜ್ಯಕ್ಕೆ ಹಂಚಿಕೆಯಾಗಿದೆ. ಕಳಸಾ ನೀರು ಬಳಕೆಗೆ ಕಳಸಾ, ಹಲತಾರ ಅಣೆಕಟ್ಟೆ ನಿರ್ಮಾಣದ ಅವಶ್ಯಕತೆ ಇದೆ. ಅಣೆಕಟ್ಟೆ ನಿರ್ಮಾಣದ ಜಮೀನು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದೆ. ಹೀಗಾಗಿ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ಅನುಮತಿ ಸಿಕ್ಕಿಲ್ಲ. ಗೋವಾ ಸರ್ಕಾರ ಪರಿಸರದ ನೆಪವೊಡ್ಡಿ ಅಡ್ಡಿಪಡಿಸುತ್ತಿದೆ’ ಎಂದು ದೂರಿದ್ದಾರೆ.

‘ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವಿದೆ. ಗೋವಾದಲ್ಲೂ ಬಿಜೆಪಿ ಸರ್ಕಾರವಿದೆ. ಈ ಹಿಂದೆ ಕರ್ನಾಟಕದಲ್ಲೂ ಬಿಜೆಪಿ ಸರ್ಕಾರವಿತ್ತು. ಆದರೆ ಮಹದಾಯಿ ಯೋಜನೆ ಮಾತ್ರ ಅನುಷ್ಠಾನಗೊಂಡಿಲ್ಲ. ಇದು ಬಿಜೆಪಿ ಪಕ್ಷದ ಬದ್ಧತೆಯನ್ನು ತೋರಿಸುತ್ತದೆ. ಈ ಭಾಗದಲ್ಲಿ ಗೋವಾ ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸಿ, ಯೋಜನೆ ಅನುಷ್ಠಾನಕ್ಕೆ ಒಗ್ಗೂಡಿ ಹೋರಾಟ ಸಂಘಟಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.