ಬೆಂಗಳೂರು: ಬ್ಯಾಟರಾಯನಪುರ ಹಾಗೂ ಪೀಣ್ಯ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ನಾಯಂಡಹಳ್ಳಿ ಜಂಕ್ಷನ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಭಾನು(59) ಎಂಬುವವರು ಮೃತಪಟ್ಟಿದ್ದಾರೆ.

‘ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ಕಡೆಯಿಂದ ಕೆ.ಆರ್.ಮಾರುಕಟ್ಟೆ ಕಡೆಗೆ ಖಾಸಗಿ ಬಸ್ವೊಂದು ಸಂಚರಿಸುತ್ತಿತ್ತು. ಬಿಎಚ್ಇಎಲ್ ಬಳಿಯ ಕೆಎಸ್ಆರ್ಟಿಸಿ ಘಟಕ 5ರ ಬಳಿ ಮಹಿಳೆ ನಿಂತಿದ್ದರು. ವೇಗವಾಗಿ ಬಂದ ಬಸ್, ಮಹಿಳೆಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ ಕೆಳಕ್ಕೆ ಬಿದ್ದಿದ್ದರು. ಅವರ ಎರಡೂ ಕಾಲುಗಳ ಮೇಲೆ ಬಸ್ಸಿನ ಚಕ್ರಗಳು ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮಹಿಳೆಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದರು. ಅಲ್ಲಿ ಮಹಿಳೆ ಮೃತಪಟ್ಟಿದ್ದಾರೆ’ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಮಿಕ ಸಾವು: ತುಮಕೂರು ರಸ್ತೆಯ ಪಾರ್ಲೆ–ಜಿ ಫ್ಯಾಕ್ಟರಿ ಬಳಿ ನಡೆದ ಅಪಘಾತದಲ್ಲಿ ಕಾರ್ಮಿಕ ಬಸವರಾಜು(37) ಅವರು ಮೃತಪಟ್ಟಿದ್ದಾರೆ. ಬಸವರಾಜು ಅವರು ರಾಯಚೂರು ಜಿಲ್ಲೆಯ ಸಿಂಧನೂರಿನವರು. ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

‘ಶುಕ್ರವಾರ ಮುಂಜಾನೆ ಪಾರ್ಲೆ–ಜಿ ಫ್ಯಾಕ್ಟರಿ ಬಳಿ ವಾಹನವೊಂದು ಡಿಕ್ಕಿಯಾಗಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು.

‘ಅಪಘಾತಕ್ಕೆ ಕಾರಣವಾದ ಚಾಲಕ ವಾಹನ ನಿಲ್ಲಸದೇ ತೆರಳಿದ್ದಾನೆ. ಚಾಲಕನನನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.