ಬೆಂಗಳೂರು: ಆರೋಪಿಯೊಬ್ಬ ತನ್ನನ್ನು ಬಂಧಿಸಲು ಬಂದಿದ್ದ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಯಶವಂತಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ವಿನೋದ್ ರಾಥೋಡ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಳ್ಳತನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಿದ್ದ ಆರೋಪಿಯು ನಮ್ಮ ಠಾಣೆ ವ್ಯಾಪ್ತಿಯ ಭೂಪಸಂದ್ರ–ಹೆಬ್ಬಾಳ ರಸ್ತೆಯಲ್ಲಿರುವ ತೋಟದ ಮನೆಯ ಬಳಿ ಇರುವ ಕುರಿತು ವಿನೋದ್ ಅವರಿಗೆ ಮಾಹಿತಿ ಲಭಿಸಿತ್ತು. ಹೀಗಾಗಿ ಸಿಬ್ಬಂದಿಯೊಂದಿಗೆ ರಾತ್ರಿ 11 ಗಂಟೆ ಸುಮಾರಿಗೆ ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ, ಅವರ ಭುಜಕ್ಕೆ ಚುಚ್ಚಿ ಅಲ್ಲಿಂದ ಪಾರಾರಿಯಾದ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.