ಯಲಹಂಕ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೇಶವರಾಜಣ್ಣ ಗುರುವಾರ ನಾಮಪತ್ರ ಸಲ್ಲಿಸಿದರು. ರೋಡ್ ಶೋನಲ್ಲಿ ನಟ ದರ್ಶನ್ ಭಾಗವಹಿಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಹಳೇನಗರದ ಕೊಂಡಪ್ಪ ಬಡಾವಣೆಯಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕೇಶವರಾಜಣ್ಣ, ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಅದಕ್ಕೂ ಮುನ್ನ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಚುನಾವಣಾಧಿಕಾರಿ ಕಚೇರಿ ತನಕ ಸಾವಿರಾರು ಕಾರ್ಯಕರ್ತರೊಂದಿಗೆ ರೋಡ್ ಶೋ
ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದರ್ಶನ್, ‘ಕೇಶವರಾಜಣ್ಣ ಒಳ್ಳೆಯ ವ್ಯಕ್ತಿಯಾಗಿದ್ದು, ಯಾರಿಗೂ ತೊಂದರೆ ಕೊಡುವವರಲ್ಲ. ಮತದಾರರು ಈ ಬಾರಿ ಅವರನ್ನು ಗೆಲ್ಲಿಸುವ ಮೂಲಕ ಈ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಕೇಶವ ರಾಜಣ್ಣ ಮಾತನಾಡಿ, ‘ಯಲಹಂಕ ಕ್ಷೇತ್ರದ ಬಿಜೆಪಿ ಆಡಳಿತದಲ್ಲಿ ದೌರ್ಜನ್ಯ ಹೆಚ್ಚಾಗಿದ್ದು, ಜನರು ಭಯದ ವಾತಾವರಣದಲ್ಲಿ ಜೀವನ ನಡೆಸಬೇಕಾದ ಪರಿಸ್ಥಿತಿಯಿದೆ. ಮುಂದಿನ ದಿನಗಳಲ್ಲಿ ಬದಲಾವಣೆಯ ಗಾಳಿ ಬೀಸಲಿದ್ದು, ಜನರು ಭಯಪಡುವ ಅಗತ್ಯವಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.