ಬೆಂಗಳೂರು: ಬನಶಂಕರಿ ಠಾಣೆ ವ್ಯಾಪ್ತಿಯಲ್ಲಿ ಜಿಮ್ ತರಬೇತುದಾರ ಪ್ರಶಾಂತ್ ಪೂಜಾರಿ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ.

‘ಪ್ರಶಾಂತ್ ಪೂಜಾರಿ ಅವರು ಸಿನಿಮಾ ನಟ ಧ್ರುವ್ ಸರ್ಜಾ ಅವರಿಗೆ ಜಿಮ್ ತರಬೇತಿ ನೀಡುತ್ತಿದ್ದರು. ಪ್ರಶಾಂತ್ ಮೇಲೆ ನಡೆದಿರುವ ಹಲ್ಲೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪ್ರಶಾಂತ್ ಅವರು ಬನಶಂಕರಿ ಕೆ.ಆರ್. ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದುಕೊಂಡು ಹೊರಟಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು, ಮಾರಕಾಸ್ತ್ರಗಳಿಂದ ಹೊಡೆದು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಪ್ರಶಾಂತ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದರು.

‘ವೈಯಕ್ತಿಕ ವಿಚಾರ ಹಾಗೂ ಹಳೇ ವೈಷಮ್ಯದಿಂದಾಗಿ ಹಲ್ಲೆ ನಡೆದಿರುವ ಮಾಹಿತಿ ಇದೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.