ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಆರೋಪದಡಿ ಆ್ಯಡಂ ಬಿದ್ದಪ್ಪ ಎಂಬಾತನನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೊಡಗಿನ ಆ್ಯಡಂ, ವಸ್ತ್ರವಿನ್ಯಾಸಕ ಪ್ರಸಾದ್ ಬಿದ್ದಪ್ಪ ಅವರ ಮಗ. ಇತ್ತೀಚೆಗೆ ನಟಿಯ ಮೊಬೈಲ್ಗೆ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ನಟಿ ದೂರು ನೀಡಿದ್ದರು. ಎಫ್ಐಆರ್ ದಾಖಲಿಸಿಕೊಂಡು, ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಆರೋಪಿ ಆ್ಯಡಂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆತನ ಮೊಬೈಲ್ ಜಪ್ತಿ ಮಾಡಲಾಗಿದ್ದು, ಪರೀಕ್ಷೆಗೆಂದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದೂ ತಿಳಿಸಿದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಸಂಜನಾ, ‘ಗಣ್ಯ ವ್ಯಕ್ತಿಯೊಬ್ಬರ ಮಗ, ನನ್ನ ವಾಟ್ಸ್ಆ್ಯಪ್ಗೆ ಅಶ್ಲೀಲ ಸಂದೇಶ ಕಳುಹಿಸಿದ್ದ. ಅದರಿಂದ ಸಾಕಷ್ಟು ನೊಂದಿದ್ದೇನೆ. ಈ ಘಟನೆಯಿಂದ ನನ್ನ ಕುಟುಂಬ ವಿಚಲಿತವಾಗಿದೆ. ಸಂದೇಶ ಕಳುಹಿಸಿದ್ದವನ ವಿರುದ್ಧ ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ದೂರಿನಡಿ ಕ್ರಮ ಜರುಗಿಸಿರುವ ಪೊಲೀಸರಿಗೆ ಧನ್ಯವಾದಗಳು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.