ಬೆಂಗಳೂರು: ‘ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಸ್ಮರಿಸಿಕೊಂಡರು.

ಅನಂತಕುಮಾರ್ ಅವರ ಜನ್ಮದಿನದ ಪ್ರಯುಕ್ತ ಅನಂತಕುಮಾರ್ ಪ್ರತಿಷ್ಠಾನ ಹಾಗೂ ಅದಮ್ಯ ಚೇತನ ಫೌಂಡೇಶನ್ ಜಂಟಿಯಾಗಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಅನಂತ ನಮನ–64’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೇಂದ್ರದ ಯಾವುದೇ ವಿಚಾರ ಬಂದಾಗ ನಾವು ಅನಂತಕುಮಾರ್ ಅವರ ಮೇಲೆ ಅವಲಂಬನೆಯಾಗುತ್ತಿದ್ದೆವು. ಇತ್ತೀಚೆಗೆ ಕಾವೇರಿ ನದಿ ನೀರು ವಿಚಾರವಾಗಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿಯೂ ಅವರನ್ನು ಎಲ್ಲರೂ ನೆನಪಿಸಿಕೊಂಡರು’ ಎಂದರು.

‘ಈ ಹಿಂದೆ ಒಮ್ಮೆ ಕೃಷ್ಣಾ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಆತಂಕ ಎದುರಾಗಿತ್ತು. ಆಂಧ್ರಪ್ರದೇಶ, ತೆಲಂಗಾಣಕ್ಕೆ ಪ್ರತ್ಯೇಕವಾಗಿ ನೀರು ಹಂಚಿಕೆ ಮಾಡುವಂತೆ ಆಗ್ರಹ ವ್ಯಕ್ತವಾಗಿತ್ತು. ಆ ಸಂದರ್ಭದಲ್ಲಿ ಅನಂತಕುಮಾರ್ ಅವರು ರಾಜ್ಯದ ಪರ ನಿಂತು, ಸಮಸ್ಯೆ ಬಗೆಹರಿಸಿದರು' ಎಂದು ಸ್ಮರಿಸಿದರು.

‘ಅನಂತಕುಮಾರ್ ಒತ್ತಾಯಕ್ಕೆ ನಾನು ಬಿಜೆಪಿಗೆ ಬಂದೆ. ನನ್ನನ್ನು ಅವರು ಗೌರವದಿಂದ ನೋಡಿಕೊಂಡರು’ ಎಂದು ಹಳೆಯ ನೆನಪುಗಳನ್ನು ಅವರು ಮೆಲುಕು ಹಾಕಿದರು.

ಸ್ಫೂರ್ತಿದಾಯಕ: ರಾಜ್ಯಪಾಲ ಥಾವರಚಂದ್ ಗೆಹಲೋತ್, ‘ಅನಂತಕುಮಾರ್ ಅವರ ಚಿಂತನೆ, ಆಲೋಚನೆ, ದೂರದೃಷ್ಟಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮಾಡಿದ ಕೆಲಸಗಳು ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ. ಅವರ ಜತೆಗೆ 25 ವರ್ಷಕ್ಕೂ ಹೆಚ್ಚು ಅವಧಿ ಒಡನಾಟ ಹೊಂದಿದ್ದೆ. ತವರು ರಾಜ್ಯ ಮಧ್ಯಪ್ರದೇಶದಲ್ಲಿ ಮತ್ತು ಕೇಂದ್ರ ಸಚಿವ ಸಂಪುಟದಲ್ಲಿ ಅವರೊಂದಿಗೆ ಕೆಲಸ ಮಾಡುವ ಅವಕಾಶಗಳು ದೊರೆತಿದ್ದವು. ಅವರು ಜೀವನದ ಕೊನೆಯ ಕ್ಷಣದವರೆಗೂ ದಣಿವರಿಯದೆ ಕೆಲಸ ಮಾಡಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷ ಪಿ.ವಿ. ಕೃಷ್ಣಭಟ್, ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ಕುಮಾರ್, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದರು.

ಕೇಂದ್ರ ಅನಾವರಣ

ಅನಂತ ಚೇತನ ಭಾರತೀಯ ಜ್ಞಾನ ಪ್ರಶಿಕ್ಷಣ ಕೇಂದ್ರವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನಾವಣರಗೊಳಿಸಿದರು. ಕೇಂದ್ರದ ಬಗ್ಗೆ ವಿವರಿಸಿದ ಅದಮ್ಯ ಚೇತನ ಫೌಂಡೇಶನ್ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್ ‘ಈ ಕೇಂದ್ರದ ಮೂಲಕ ಭಾರತೀಯ ಇತಿಹಾಸ ಗಣಿತ ವಾಸ್ತುಶಿಲ್ಪ ಪುರಾಣದ ಬಗ್ಗೆ ನಮ್ಮ ಹಿರಿಯರು ಹೊಂದಿದ್ದ ದೃಷ್ಟಿಕೋನ ವನ್ನು ಇಂದಿನ ಪೀಳಿಗೆಗೆ ತಿಳಿಸಲಾಗುತ್ತದೆ. ಪಠ್ಯಕ್ರಮದಲ್ಲಿ ಅಳವಡಿಸುವ ಉದ್ದೇಶವನ್ನೂ ಹೊಂದಿದ್ದೇವೆ. ಅನಂತಕುಮಾರ್ ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗುತ್ತಿದ್ದೇವೆ. ಅವರ ಒಡನಾಡಿಗಳ ಆತ್ಮೀಯ ಬರಹಗಳನ್ನು ಒಳಗೊಂಡ ‘ಅನಂತ ನಮನ’ ಕೃತಿಯು ಇದೇ ಶನಿವಾರ ಲೋಕಾರ್ಪಣೆಯಾಗಲಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.