ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಬಳ್ಳಾರಿ ರಸ್ತೆಯಲ್ಲಿರುವ ಎಲಿವೇಟೆಡ್ ಮೇಲ್ಸೇತುವೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಂಚಾರ ಪೊಲೀಸರು, ‘ಫೆ. 13ರಂದು ಬೆಳಿಗ್ಗೆ 8 ಗಂಟೆಯಿಂದ 11.30 ಗಂಟೆಯವರೆಗೆ ಎಸ್ಟಿಮ್ ಮಾಲ್ನಿಂದ ಯಲಹಂಕವರೆಗಿನ ಮೇಲ್ಸೇತುವೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ’ ಎಂದಿದ್ದಾರೆ.

‘ಪ್ರಧಾನ ಮಂತ್ರಿ ಹಾಗೂ ರಾಷ್ಟ್ರ–ಅಂತರರಾಷ್ಟ್ರೀಯ ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಮೇಲ್ಸೇತುವೆಯಲ್ಲಿ ಸಂಚರಿಸುವ ವಾಹನಗಳು, ಹೆಣ್ಣೂರು ವೃತ್ತದಿಂದ ಪರ್ಯಾಯ ರಸ್ತೆ ಮೂಲಕ ವಿಮಾನ ನಿಲ್ದಾಣದತ್ತ ಹೋಗಬಹುದು’ ಎಂದು ತಿಳಿಸಿದ್ದಾರೆ.

‘ಏರೋ ಇಂಡಿಯಾ ಪ್ರದರ್ಶನದ ಪಾಸ್ ಇರುವ ವಾಹನಗಳು ಯಥಾಪ್ರಕಾರ ಮೇಲ್ಸೇತುವೆಯಲ್ಲಿ ಸಂಚರಿಸಲು ಅವಕಾಶವಿದೆ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.