ಬೆಂಗಳೂರು: ‘ದೇಶದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು’ ಎಂದು ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹೇಳಿದರು.

‘ಪ್ರೈಡ್ ಫೆಸ್ಟ್ 2023’ ಸ್ಮರಣಾರ್ಥ ನಗರದಲ್ಲಿ ಬುಧವಾರ ಹಮ್ಮಿಕೊಂಡ ‘ಸಂವಾದ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

‘ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬಾರದು ಎಂಬ ಕೇಂದ್ರ ಸರ್ಕಾರದ ನಿಲುವಿನಿಂದ ಹತಾಶೆಗೊಳಗಾಗಿದ್ದೇನೆ. ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಇರದಿರುವುದರಿಂದ ಈ ಸಂಬಂಧ ಹೊಂದಿರುವವರು ಹಲವು ತೊಡಕುಗಳನ್ನು ಎದುರಿಸುತ್ತಿದ್ದಾರೆ. ಇದನ್ನು ಕಾನೂನುಬದ್ಧಗೊಳಿಸಿದರೆ ಅವರಿಗೆ ನೆಮ್ಮದಿಯುತ ಜೀವನ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

‘ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ನಿಲುವು ತಾಳಬೇಕು’ ಎಂದರು.

ರೂಪದರ್ಶಿ ಬೆಯೋನ್ಸ್, ‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಸಾರ್ವಜನಿಕ ಸ್ಥಳಗಳಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ಘನತೆ–ಗೌರವದ ಜೀವನ ನಡೆಸಲು ಅವಕಾಶ ಒದಗಿಸಿಕೊಡಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.