ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೆ.21ಕ್ಕೆ ಅಕ್ಕಿನೇನಿ ನಾಗೇಶ್ವರರಾವ್‌ ಶತಮಾನೋತ್ಸವ ಕಾರ್ಯಕ್ರಮ

Published : 17 ಸೆಪ್ಟೆಂಬರ್ 2024, 16:19 IST
Last Updated : 17 ಸೆಪ್ಟೆಂಬರ್ 2024, 16:19 IST
ಫಾಲೋ ಮಾಡಿ
Comments

ಬೆಂಗಳೂರು: ತೆಲುಗು ವಿಜ್ಞಾನ ಸಮಿತಿ ವತಿಯಿಂದ ನಟ ದಿವಂಗತ ಅಕ್ಕಿನೇನಿ ನಾಗೇಶ್ವರರಾವ್‌ ಅವರ ಶತಮಾನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್‌ 21ರ ಸಂಜೆ 5.30ಕ್ಕೆ ವೈಯಾಲಿಕಾವಲ್‌ನಲ್ಲಿರುವ ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎ.ರಾಧಾಕೃಷ್ಣರಾಜು ತಿಳಿಸಿದರು.

ದಕ್ಷಿಣ ಭಾರತ ಚಿತ್ರನಟರಾದ ಸುಮನ್‌ ತಲ್ಸಾರ್‌ ಹಾಗೂ ಜಯಸುಧಾ ಅವರಿಗೆ ಶತಮಾನೋತ್ಸವ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಮಾರಂಭ ಉದ್ಘಾಟಿಸಲಿದ್ದು, ಆಂಧ್ರಪ್ರದೇಶದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸತ್ಯಕುಮಾರ್‌ ಭಾಗವಹಿಸುವರು ಎಂದರು.

ಇದೇ ವೇಳೆ ಅಕ್ಕಿನೇನಿ ನಾಗೇಶ್ವರರಾವ್‌ ಅವರ ಚಲನಚಿತ್ರ ಗೀತೆಗಳನ್ನು ನವೀನ್ ಮತ್ತು ಧನಲಕ್ಷ್ಮೀ ಅವರು ಹಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆಲುಗು ಹಾಗೂ ಕನ್ನಡ ಮಹಾಕವಿಗಳ ವರ್ಣಚಿತ್ರಗಳ ಉದ್ಘಾಟನೆ ನೆರವೇರಿಸುವರು ಎಂದು ಪ್ರಧಾನ ಕಾರ್ಯದರ್ಶಿ ಐ.ಲಕ್ಷ್ಮೀ ರೆಡ್ಡಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT