ಬೆಂಗಳೂರು: ‘ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಸ್ಥಾನ, ಅದಕ್ಕೆ ಸಂಬಂಧಿಸಿದ ಶಾಸನ ಹಾಗೂ ಪಳೆಯುಳಿಕೆಗಳು; ಕರ್ನಾಟಕ ಪಾರಂಪರಿಕ ಸ್ಮಾರಕಗಳ ಕಾಯ್ದೆ–1961ರ ಅನ್ವಯ ಪುರಾತನ ಸ್ಮಾರಕಗಳ ವ್ಯಾಪ್ತಿಗೆ ಒಳಪಡುತ್ತವೆಯೋ ಹೇಗೆ ಎಂಬುದನ್ನು ನಿರ್ಧರಿಸಲು ತ್ರಿಸದಸ್ಯ ತಜ್ಞರ ಸಮಿತಿ ರಚಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ಮಹಾರಾಷ್ಟ್ರದ ಕೊಲ್ಹಾಪುರದ ಗಡಹಿಂಗ್ಲಜ ನಗರದ ಕಾನೂನು ವಿದ್ಯಾರ್ಥಿ ನಿಖಿಲ್ ವಿಠ್ಠಲ ಪಾಟೀಲ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ನಡೆಸಿತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ್ ಕಾಮತ್, ‘ಅಲ್ಲಮ ಪ್ರಭು ದೇವಾಲಯವನ್ನು ರಾಷ್ಟ್ರೀಯ ಮಹತ್ವದ ಸ್ಮಾರಕ ಎಂದು ಘೋಷಿಸಲಾಗಿಲ್ಲ. ಆದರೆ, ಅದು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಪಳೆಯುಳಿಕೆ ಕಾಯ್ದೆ ಅಡಿ ಪ್ರಾಚೀನ ಸ್ಮಾರಕಗಳ ವ್ಯಾಖ್ಯಾನದ ವ್ಯಾಪ್ತಿಗೆ ಒಳಪಡುತ್ತದೆ’ ಎಂದು ವಿವರಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ, ‘ಅರ್ಜಿದಾರರ ಮನವಿಗೆ ಅನುಗುಣವಾಗಿ ವಸ್ತುಸ್ಥಿತಿ ಅರಿಯಲು ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿಯನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಬೇಕು. ಈ ಕುರಿತ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿದೆ.

ಪ್ರಾಚೀನ ಸ್ಮಾರಕ ಎಂದು ಘೋಷಿಸಲು ಮನವಿ: ‘ಅಲ್ಲಮ ಪ್ರಭು ಸ್ವಾಮಿ ದೇವಾಲಯವು ಶತಮಾನಕ್ಕೂ ಹಳೆಯದಾಗಿದ್ದು, ಅದನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸಬೇಕು. ದೇವಾಲಯವು ವರ್ಷದ ಆರು ತಿಂಗಳು ನೀರಿನಲ್ಲಿ ಮುಳುಗುವುದರಿಂದ ಅದನ್ನು ಸ್ಥಳಾಂತರ ಮಾಡಬೇಕು. ದೇವಸ್ಥಾನವನ್ನು 17 ಮತ್ತು 18ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಅದು ಪ್ರಾಚೀನ ಸ್ಮಾರಕಗಳ ವ್ಯಾಖ್ಯಾನಕ್ಕೆ ಒಳಪಡುತ್ತದೆ. ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವದ ಹಿನ್ನೆಲೆಯಲ್ಲಿ ದೇವಾಲಯವನ್ನು ಪ್ರಾಚೀನ ಸ್ಮಾರಕ ಎಂದು ಘೋಷಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.