ಬೆಂಗಳೂರು: ‘ಡಾ.ಬಿ.ಆರ್.ಅಂಬೇಡ್ಕರ್ ಅವರು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಮಾನವತಾವಾದಿ. ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳಬೇಕಾದರೆ ನಾವೆಲ್ಲ ಅವರ ಆದರ್ಶಗಳನ್ನು ಪಾಲಿಸಬೇಕು’ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಸ್.ಸಚ್ಚಿದಾನಂದ ಹೇಳಿದರು.

ವಿಶ್ವವಿದ್ಯಾಲಯವು ಬುಧವಾರ ಆಯೋಜಿಸಿದ್ದ ಅಂಬೇಡ್ಕರ್ ಅವರ 130ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್ ಶೋಷಿತ ಸಮುದಾಯದ ಧನಿಯಾಗಿದ್ದರು. ಅವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರ ಕೆಲಸಗಳು ನಮ್ಮೆಲ್ಲರಿಗೂ ಆದರ್ಶ. ನಾವೆಲ್ಲ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಎತ್ತಿಹಿಡಿಯಬೇಕು. ಜೊತೆಗೆ ಅವುಗಳನ್ನು ಮೈಗೂಡಿಸಿಕೊಳ್ಳಬೇಕು. ಹಾಗಾದಾಗ ಮಾತ್ರ ಅಂಬೇಡ್ಕರ್ ಕಂಡ ಪ್ರಜಾಪ್ರಭುತ್ವದ ಕನಸು ನನಸಾಗಿಸಲು ಸಾಧ್ಯ’ ಎಂದರು.

ವಿಶ್ವವಿದ್ಯಾಲಯದ ಕುಲಸಚಿವ ಎನ್.ರಾಮಕೃಷ್ಣರೆಡ್ಡಿ, ಹಣಕಾಸು ಅಧಿಕಾರಿ ಮಂಜುನಾಥ್ ಹೆಗಡೆ ಹಾಗೂ ಉಪ ಕುಲಸಚಿವ ಬಿ.ವಸಂತ ಶೆಟ್ಟಿ ಅವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.