ಬೆಂಗಳೂರು: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತಿ ಸಮಾವೇಶವು ಡಿ.10ರಂದು ಬೆಳಿಗ್ಗೆ 11ಕ್ಕೆ ಅರಮನೆ ಮೈದಾನದಲ್ಲಿ ನಡೆಯಲಿದೆ.

ಆರ್ಯ ಈಡಿಗರ ಸಂಘ ಸ್ಥಾಪನೆಯಾಗಿ 75 ವರ್ಷಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ಈಡಿಗ, ಬಿಲ್ಲವ, ಪೂಜಾರಿ, ದೀವರು, ಭಂಡಾರಿ, ಬೆಲ್ಚಡ, ಹಾಲಕ್ಷತ್ರೀಯ, ದೇಶ ಭಂಡಾರಿ, ದೇವರ, ದೇವರ ಮಕ್ಕಳು, ದೀವರ ಮಕ್ಕಳು, ಎಳಿಗ, ಎಳವ, ಗಾಮಲ್ಲ, ಗೌಂಡ್ಲ, ಹಳೇಪೈಕರು, ಹಳೇಪೈಕ್, ಇಲ್ಲಾವನ್, ಕಲಾಲ್, ಮಲೆಯಾಳಿ ಬಿಲ್ಲವ, ನಾಡಾರ್, ನಾಮಧಾರಿ, ತಿಯಾನ್ ತಿಯ್ಯ, ಈಳಿಗ, ಗೊಂಡ್ಲತಿಯನ್ ಪಂಗಡಗಳಲ್ಲಿ ಜಾಗೃತಿಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸಮಾವೇಶದಲ್ಲಿ ಸೋಲೂರು ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ಧರ್ಮಸ್ಥಳ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ನಿಟ್ಟೂರು ರೇಣುಕಾನಂದ ಸ್ವಾಮೀಜಿ, ಕಾರ್ತೀಕೇಯ ಪೀಠದ ಯೋಗೇಂದ್ರ ಅವಧೂತ, ನಿಪ್ಪಾಣಿ ಅರುಣಾನಂದ ಸ್ವಾಮೀಜಿ, ಶಿವಗಿರಿ ಸತ್ಯಾನಂದತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಸಮುದಾಯ ಪ್ರತಿನಿಧಿಸುವ ಎಲ್ಲ ಸಚಿವರು, ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.