ಬೆಂಗಳೂರು: ‘ನಗರ ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಪಾರದರ್ಶಕತೆ ಇಲ್ಲ’ ಎಂದು ಕರ್ನಾಟಕದ ನಗರಗಳಲ್ಲಿ ವಿಕೇಂದ್ರೀಕೃತ ಸಹಭಾಗಿತ್ವದ ಆಡಳಿತದ ವಿಶ್ಲೇಷಣಾತ್ಮಕ ವಿಮರ್ಶೆ ವರದಿಯಲ್ಲಿ ತಿಳಿಸಲಾಗಿದೆ.

‘ಜನಾಗ್ರಹ’ ಸಂಸ್ಥೆ ಸಹಯೋಗದಲ್ಲಿ ಶನಿವಾರ ನಡೆದ ಕರ್ನಾಟಕ ನಗರ ಆಡಳಿತದ ದುಂಡು ಮೇಜಿನ ಸಭೆಯ ನಂತರ ಈ ವರದಿಯನ್ನು ಬಿಡುಗಡೆ ಮಾಡಲಾಯಿತು.

ಮಹಾನಗರ ಪಾಲಿಕೆಗಳಲ್ಲಿ ಚರ್ಚೆಗಳು ಮತ್ತು ನಡಾವಳಿಗಳು, ಅಭಿವೃದ್ಧಿ ಯೋಜನೆಗಳ ದಾಖಲಾತಿಗಳು, ಪ್ರಮುಖ ಮಾಹಿತಿಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ಸಂವಿಧಾನಾತ್ಮಕ ಸ್ಥಳೀಯ ಆಡಳಿತದ 18ರಲ್ಲಿ 15 ಕಾರ್ಯಗಳ ಮೇಲೆ ನಗರ ಸ್ಥಳೀಯ ಸಂಸ್ಥೆಗಳಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಹೇಳಲಾಗಿದೆ.

ರಾಜ್ಯದಲ್ಲಿರುವ 11 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸರಾಸರಿ 22 ತಿಂಗಳು ವಿಳಂಬವಾಗಿದೆ. ಬೆಂಗಳೂರಿನಲ್ಲಿ ನಾಲ್ಕು ವರ್ಷ, ವಿಜಯಪುರದಲ್ಲಿ ನಾಲ್ಕೂವರೆ ವರ್ಷಗಳಿಂದ ಚುನಾವಣೆ ನಡೆದೇ ಇಲ್ಲ. ಪಾಲಿಕೆಗಳ ರಚನೆ ಮತ್ತು ಮಹಾಪೌರರ/ಅಧ್ಯಕ್ಷರ ಆಯ್ಕೆಯಲ್ಲಿಯೂ ಸರಾಸರಿ ಎರಡೂವರೆ ವರ್ಷಗಳ ವಿಳಂಬ ಕಂಡು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

11 ಮಹಾನಗರ ಪಾಲಿಕೆಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ವಾರ್ಡ್ ಸಮಿತಿಗಳು ಅಸ್ತಿತ್ವದಲ್ಲಿವೆ. ವಾರ್ಡ್ ಸಮಿತಿಗಳು ಮತ್ತು ಪ್ರಾದೇಶಿಕ ಸಭೆಗಳನ್ನು ರಚಿಸಿಲ್ಲ. ಐದು ವರ್ಷಗಳ ಅವಧಿ ಮುಗಿಯುವ ಮುನ್ನ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸುತ್ತಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿ ಬಿಡುಗಡೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನಾಗ್ರಹದ ಸಹಭಾಗಿತ್ವ ಆಡಳಿತ ವಿಭಾಗದ ಮುಖ್ಯಸ್ಥ ಸಂತೋಷ್ ನರಗುಂದ, ‘ಇದು ಅಕಾಡೆಮಿಕ್ ವರದಿಯಲ್ಲ. ಮಹಾಲೇಖಪಾಲರ (ಸಿಎಜಿ) ವರದಿ, ಕರ್ನಾಟಕ ಆಡಳಿತ ಸುಧಾರಣಾ ಆಯೋಗ, ರಾಜ್ಯ ಹಣಕಾಸು ಆಯೋಗದ ವರದಿ ಮತ್ತು ಹೈಕೋರ್ಟ್ ತೀರ್ಪುಗಳು ಮತ್ತು ವಾರ್ಡ್ ಸಮಿತಿ ಬಳಗಗಳು ಸಂಗ್ರಹಿಸಿದ ಮೂರು ವರ್ಷಗಳ ಮಾಹಿತಿಯನ್ನು ಕ್ರೋಡೀಕರಿಸಿ, ದತ್ತಾಂಶಗಳನ್ನು ವಿಶ್ಲೇಷಿಸಿ, ವಿಮರ್ಶಾ ವರದಿ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜನಾಗ್ರಹದ ಮುಖ್ಯ ಕಾರ್ಯಕಾರಿ ಅಧಿಕಾರಿ ಶ್ರೀಕಾಂತ್ ವಿಶ್ವನಾಥನ್, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಬೆಳಗಾವಿ, ಕಲಬುರಗಿ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಕರ್ನಾಟಕ ವಾರ್ಡ್ ಸಮಿತಿ ಬಳಗದ ಪ್ರತಿನಿಧಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.