ಬೆಂಗಳೂರು: ‘ಪಡಿತರ ವಿತರಕರಿಗೆ ಪ್ರತಿ ಕೆ.ಜಿ ಅಕ್ಕಿಗೆ ನೀಡುವ ಕಮಿಷನ್ ಮೊತ್ತವನ್ನು ₹1.50ಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಅರಮನೆ ಮೈದಾನದಲ್ಲಿ ಆಹಾರ ಇಲಾಖೆ ಆಯೋಜಿಸಿದ್ದ ‘ಅನ್ನಭಾಗ್ಯ’ ದಶಮಾನೋತ್ಸವ ಹಾಗೂ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಮಾವೇಶ ಉದ್ಘಾಟಿಸಿ ಗುರುವಾರ ಅವರು ಮಾತನಾಡಿದರು.

‘ಪ್ರಸ್ತುತ ಪ್ರತಿ ಕೆ.ಜಿ ಅಕ್ಕಿಗೆ ₹1.24 ಕಮಿಷನ್ ಇದೆ. ಪಡಿತರ ವಿತರಕರ ಸಮಸ್ಯೆಗಳನ್ನು ಗಮನಿಸಿದ್ದೇನೆ. ಸಚಿವ ಮುನಿಯಪ್ಪ ಅವರೂ ಕಮಿಷನ್ ಹೆಚ್ಚಿಸುವ ಕುರಿತು ಮನವಿ ಮಾಡಿದ್ದರು. ಎಲ್ಲ ಅಂಶಗಳನ್ನು ಪರಿಗಣಿಸಿ ಕಮಿಷನ್ ಹೆಚ್ಚಿಸಲಾಗುತ್ತಿದೆ’ ಎಂದು ಹೇಳಿದರು.

‘2013ರ ಬಸವ ಜಯಂತಿಯ ದಿನವೇ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಬಸವಣ್ಣನವರ ದಾಸೋಹದಿಂದ ಪ್ರೇರಿತವಾಗಿ ಅನ್ನಭಾಗ್ಯ ಜಾರಿ ಮಾಡಿದೆ’ ಎಂದು ದಶಕಗಳ ಹಿಂದಿನ ಘಟನೆಯನ್ನು ನೆನಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.