ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ಇದೇ 17ರಂದು ‘ಅತಿಥಿ ಶಿಕ್ಷಕರ ವಾರ್ಷಿಕ ರಾಜ್ಯ ಸಮ್ಮೇಳನವನ್ನು ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಶಿಕ್ಷಕರ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನುಮಂತ ಎಚ್.ಎಸ್. ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಮೆರಿಟ್ ಪದ್ಧತಿ ಕೈಬಿಟ್ಟು, ಮೊದಲು ಕೆಲಸ ಮಾಡಿದವರಿಗೆ ಆದ್ಯತೆ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನದ ಆಶಯದಂತೆ ತಿಂಗಳಿಗೆ ₹25 ಸಾವಿರ ವೇತನ ನೀಡಬೇಕು. ಶಿಕ್ಷಕರ ನೇರ ನೇಮಕಾತಿಯಲ್ಲಿ ಅತಿಥಿ ಶಿಕ್ಷಕರ ಕೆಲಸ ಪರಿಗಣಿಸಿ ಪ್ರತಿವರ್ಷ ಶೇ 5ರಷ್ಟು ಕೃಪಾಂಕ ನೀಡಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರಿ ಶಿಕ್ಷಕರಂತೆ ಬೇಸಿಗೆಯ ರಜೆ ಸೇರಿದಂತೆ 12 ತಿಂಗಳು ವೇತನ ನೀಡಬೇಕು. ಪ್ರತಿವರ್ಷ ಸೇವೆ ಸಲ್ಲಿಸಿದ ಶಾಲೆಗಳಲ್ಲಿ ಪ್ರತಿವರ್ಷ ಸೇವಾ ಪ್ರಮಾಣ ಪತ್ರವನ್ನು ನೀಡಬೇಕು. ಸರ್ಕಾರಿ ಶಿಕ್ಷಕರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕೆಂದು ಸಮ್ಮೇಳನದಲ್ಲಿ ಹಕ್ಕೊತ್ತಾಯಗಳನ್ನು ಮಂಡನೆ ಮಾಡಲಾಗುವುದು’ ಎಂದು ತಿಳಿಸಿದರು.

ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.