ರಾಜರಾಜೇಶ್ವರಿನಗರ: ರಾಜಕಾಲುವೆಯಲ್ಲಿನ ಹೂಳು ತೆಗೆಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡುವುದು, ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ, ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ₹200 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಬಿಬಿಎಂಪಿ ಹೇರೋಹಳ್ಳಿ ವಾರ್ಡ್ನ ಆದಾಯ ತೆರಿಗೆ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಉದ್ಯಾನ, ಜಿಮ್ ಕೇಂದ್ರ, ನಡಿಗೆ ಪಥ ಹಾಗೂ ಹೊಸದಾಗಿ ಅಭಿವೃದ್ಧಿಪಡಿಸಿರುವ ಕೆರೆ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಕ್ಷೇತ್ರದ ಎಲ್ಲ ಕೆರೆಗಳಿಗೂ ನೀರು ತುಂಬಿಸಲಾಗುವುದು. ಈ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದೆ. ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಡಿ ಗ್ರೂಪ್ ಬಡಾವಣೆಗಳಲ್ಲಿ 5ನೇ ಹಂತದ ಕಾವೇರಿ ಕುಡಿಯುವ ನೀರು ಸರಬರಾಜು ಯೋಜನೆಯ ಜಲಸಂಗ್ರಹಣಾ ಕೇಂದ್ರ ನಿರ್ಮಾಣವಾಗಿದೆ ಎಂದರು.

ಆದಾಯ ತೆರಿಗೆ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದರಾಜು, ಬಿಬಿಎಂಪಿ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್, ಪ್ರೇಮಕುಮಾರ್, ಶಾಂತಾವಾಸು, ಸುಧಾಕರ್ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.