ಬೆಂಗಳೂರು: ‘ಎಲ್ಲ ವಾರ್ಡ್ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುತ್ತದೆ. ನಾಗರಿಕರು ದೂರು ನೀಡಿ ಪರಿಹಾರ ಕಂಡುಕೊಳ್ಳಬಹುದು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ದಾಸರಹಳ್ಳಿಯಲ್ಲಿ ನಾಗರಿಕರೊಬ್ಬರು ‘ಈ ಹಿಂದೆ ವಾರ್ಡ್ ಸಮಿತಿ ಸಭೆಗಳಲ್ಲಿ ಸಮಸ್ಯೆ ಹೇಳಿಕೊಳ್ಳುತ್ತಿದ್ದೆವು. ಈಗ ಸಭೆಗಳು ನಡೆಯುತ್ತಿಲ್ಲ. ಸಮಸ್ಯೆಗಳಿಗೆ ಪರಿಹಾರ ಆಗುತ್ತಿಲ್ಲ’ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಆಯುಕ್ತರು, ‘ನೋಡಲ್ ಅಧಿಕಾರಿಗಳಿಂದ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದರು.

ಮನೆ ಖರೀದಿಸಲು ಅಂತಿಮ ಇ-ಖಾತಾ ಪಡೆಯಲು ಸಾಕಷ್ಟು ಸಮಸ್ಯೆ ಆಗುತ್ತಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಿದ ನಾಗರಿಕರು, ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದರು. ವಾರದೊಳಗಾಗಿ ಈ ಸಮಸ್ಯೆ ಬಗೆಹರಿಸಲು ಜಂಟಿ ಆಯುಕ್ತರಿಗೆ ಸೂಚಿಸಿದರು.

ಸರ್ವೀಸ್ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಭುಜಕ್ಕೆ ಪೆಟ್ಟಾಗಿದೆ. ₹6 ಲಕ್ಷ ವೆಚ್ಚವಾಗಿದೆ ಎಂದು ವ್ಯಕ್ತಿಯೊಬ್ಬರು ಅಳಲು ತೋಡಿ
ಕೊಂಡರು. ಕಾಯ್ದೆ ಪ್ರಕಾರ ₹3.5 ಲಕ್ಷವನ್ನು ಅವರ ಖಾತೆಗೆ ಜಮೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾವೇರಿ ನೀರು ಸಂಪರ್ಕ, ಒಂಟಿ ಮನೆ ನಿರ್ಮಾಣಕ್ಕೆ ಅನುದಾನ ಮಂಜೂರಾತಿ, ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ, ರಸ್ತೆ ಬದಿ ಕಸ ಬಿಸಾಡುವ ಸಮಸ್ಯೆ, ಸಹಕಾರ ನಗರದಲ್ಲಿ ಚರಂಡಿ ನಿರ್ಮಾಣ, ರಸ್ತೆ ಮೇಲೆ ಕೊಳಚೆ ನೀರು ತುಂಬಿ ಹರಿಯುತ್ತಿರುವುದು, ಅನಧಿಕೃತ ಕಟ್ಟಡಗಳನ್ನು ತೆರವು, ಮರದ ಕೊಂಬೆಗಳು ರಸ್ತೆಯಲ್ಲಿ ಬಿದ್ದಿರುವುದು, ದಾಸರಹಳ್ಳಿ ಮುಖ್ಯರಸ್ತೆಯಲ್ಲಿ ಪಾದಚಾರಿ ಒತ್ತುವರಿ ಹಾಗೂ ರಸ್ತೆ ಬದಿ ಪಾರ್ಕಿಂಗ್ ನಿಷೇಧ, ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆಯಲ್ಲಿ ಹೂಳೆತ್ತುವುದು, ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮೇಲೆ ಮನೆ ನಿರ್ಮಾಣ ಮಾಡಿದವರ ವಿರುದ್ಧ ಕ್ರಮ, ಹಸಿ, ಒಣ ತ್ಯಾಜ್ಯ ವಿಂಗಡಣೆಯನ್ನು ಕಡ್ಡಾಯಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನಾಗರಿಕರು ಮಂಡಿಸಿದರು. ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ತುಷಾರ್ ಅಧಿಕಾರಿಗಳಿಗೆ ಹೇಳಿದರು.

ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಉಪ ಆಯುಕ್ತೆ ಮಮತಾ, ಮುಖ್ಯ ಎಂಜಿನಿಯರ್ ರಂಗನಾಥ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.