ಬೆಂಗಳೂರು: ‘ಬೆಂಗಳೂರು ದಕ್ಷಿಣ ತಾಲ್ಲೂಕು ಕೆಂಗೇರಿ ಹೋಬಳಿಯ ಚನ್ನಸಂದ್ರ ಹಾಗೂ ಹಲಗೆವಡೇರಹಳ್ಳಿ ನಡುವೆ ಹಾದು ಹೋಗುವ ರಾಜಕಾಲುವೆ ಒತ್ತುವರಿ ಮಾಡಲಾಗಿದೆ ಎನ್ನುವ ಸ್ಥಳದಲ್ಲಿ ಅಕ್ರಮ ನಿರ್ಮಾಣದ ಕಟ್ಟಡ ಕಾಮಗಾರಿ ಮುಂದುವರಿಸಿದರೆ ಸಂಬಂಧಿಸಿದವರು ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ.

ಈ ಸಂಬಂಧ ಸಿ.ಕೆ.ಮಂಜುನಾಥ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ಬಿಬಿಎಂಪಿ ಮುಖ್ಯ ಆಯುಕ್ತ, ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ಆಯುಕ್ತ ಹಾಗೂ ಒತ್ತುವರಿದಾರರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತು.

ಮನವಿ: ‘ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳು ರಾಜಕೀಯ ಪ್ರಭಾವಿಗಳಾಗಿದ್ದು, ಪಾಲಿಕೆಯ ಮಾಜಿ ಕಾರ್ಪೋರೇಟರ್ ಸಂಬಂಧಿಗಳಾಗಿದ್ದಾರೆ. ಇವರೊಂದಿಗೆ ಬಿಬಿಎಂಪಿ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಕಾಮಗಾರಿ ಪ್ರತಿನಿತ್ಯವೂ ಮುಂದುವರಿದಿದ್ದು, ಈಗಾಗಲೇ ಶೇ 70ರಷ್ಟು ಕಾಮಗಾರಿ ಮುಗಿದಿದೆ. ಒಂದೊಮ್ಮೆ ಕಾಮಗಾರಿ ಪೂರ್ಣಗೊಂಡರೆ ಅರ್ಜಿ ಅರ್ಥ ಕಳೆದುಕೊಳ್ಳುತ್ತದೆ. ಹಾಗಾಗಿ, ನಿರ್ಮಾಣ ಕಾಮಗಾರಿಗೆ ತಡೆ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.