ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನಸೌಧ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವ ಬಂಧನ

ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
Published 17 ಜನವರಿ 2024, 14:48 IST
Last Updated 17 ಜನವರಿ 2024, 14:48 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧ ಹಾಗೂ ಎಂ.ಎಸ್‌.ಬಿಲ್ಡಿಂಗ್‌ನಲ್ಲಿರುವ ಬೇರೆ ಬೇರೆ ಇಲಾಖೆಯ ಕಚೇರಿಗಳಿಗೆ ಕರೆ ಮಾಡಿ, ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ.

‘ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಕರೆ ಮಾಡಿ ಅಧಿಕಾರಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಆರೋಪಿಸಿ, ಮಹಿಳಾ ಅಧಿಕಾರಿಯೊಬ್ಬರು ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆದರೆ, ದೂರು ನೀಡಿದಂತೆ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಹೆಸರು ಹೇಳಿದ್ದಕ್ಕೆ ಯಾವುದೇ ಪುರಾವೆ ಲಭಿಸಿಲ್ಲ. ಅಧಿಕಾರಿಯೊಬ್ಬರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಯಾವ ಕಾರಣಕ್ಕೆ ಮಾಹಿತಿ ಕಲೆ ಹಾಕುತ್ತಿದ್ದ ಎಂಬುದು ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಆರೋಪಿ ನಿವೃತ್ತ ಅಧಿಕಾರಿಯೊಬ್ಬರ ಪುತ್ರ. ತಂದೆ ಹೆಸರು ಹೇಳಿಕೊಂಡು ವಿಧಾನಸೌಧ ಹಾಗೂ ಎಂ.ಎಸ್‌. ಬಿಲ್ಡಿಂಗ್‌ನಲ್ಲಿ ಸುತ್ತಾಟ ನಡೆಸುತ್ತಿದ್ದ. ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT