ಕೆಂಗೇರಿ: ಕುಂಬಳಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಶ್ವಿನಿ ಪಿ. ಹಾಗೂ ಉಪಾಧ್ಯಕ್ಷರಾಗಿ ವೆಂಕಟೇಗೌಡ ಅವರು ಅವಿರೋಧ ಆಯ್ಕೆಯಾದರು.

ರಂಜಿತಾ ಅಧ್ಯಕ್ಷೆ ಸ್ಥಾನಕ್ಕೆ ಹಾಗೂ ನರಸಿಂಹ ಮೂರ್ತಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು.

50 ಸದಸ್ಯ ಬಲದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಯಾರೊಬ್ಬರೂ ಉಮೇದುವಾರಿಕೆ ಸಲ್ಲಿಸದ ಹಿನ್ನೆಲೆಯಲ್ಲಿ ಅಶ್ವಿನಿ ಪಿ. ಹಾಗೂ ವೆಂಕಟೇಗೌಡ ಅವಿರೋಧವಾಗಿ ಆಯ್ಕೆಯಾದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್ ಎಚ್.ಜಿ.ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು

ಸಹಕಾರ ಸಚಿವ ಎಸ್. ಟಿ.ಸೋಮ ಶೇಖರ್, ‘ಚುನಾವಣೆ ವೇಳೆಯಲ್ಲಿ ಮಾತ್ರ ಕ್ಷೇತ್ರದಲ್ಲಿ ಕಂಡು ಬರುವ ವಿಪಕ್ಷ ನಾಯಕರಿಗೆ ನನ್ನ ಮೇಲೆ ವಿಶೇಷ ಪ್ರೀತಿ. ಹಾಗಾಗಿಯೇ ಪ್ರೀತಿಯಿಂದ ನನ್ನ ವಿರುದ್ದ ಅಪ ಪ್ರಚಾರ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಮಾಜಿ ಅಧ್ಯಕ್ಷ ಚಿಕ್ಕರಾಜು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಂಜೇಗೌಡ.ಕೆ, ನಂದಕುಮಾರ್, ಇಲಿಯಾಸ್, ಅನೀಸ್, ಧರ್ಮಯ್ಯ, ಯಶೋದಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.