ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳಾ ಪೌರಕಾರ್ಮಿಕರ ಮೇಲೆ ಹಲ್ಲೆ: ಪೊಲೀಸ್‌ ಕಮಿಷನರ್‌ಗೆ ಬಿಬಿಎಂಪಿ ಆಯುಕ್ತರ ಪತ್ರ

Published : 21 ಸೆಪ್ಟೆಂಬರ್ 2024, 14:18 IST
Last Updated : 21 ಸೆಪ್ಟೆಂಬರ್ 2024, 14:18 IST
ಫಾಲೋ ಮಾಡಿ
Comments

ಬೆಂಗಳೂರು: ಮಹಿಳಾ ಪೌರಕಾರ್ಮಿಕರ ಮೇಲೆ ದೈಹಿಕ ಹಲ್ಲೆ ಹಾಗೂ ಜಾತಿ ನಿಂದನೆ ಮಾಡಿರುವವರ ಮೇಲೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಪತ್ರ ಬರೆದಿದ್ದಾರೆ.

ಬಿಬಿಎಂಪಿ ವಾರ್ಡ್‌ 72ರ ವ್ಯಾಪ್ತಿಯ ಭಾರತ್‌ನಗರದ 14ನೇ ಅಡ್ಡರಸ್ತೆಯಲ್ಲಿ  ಸೆ.11ರಂದು ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಶಾಂತಾ, ಲಕ್ಷ್ಮೀ, ಅಣ್ಣಿಯಮ್ಮ, ಮುನಿರತ್ನ, ರಾಮಕ್ಕ ಎಂಬ ಐವರು ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿ ಚಂದ್ರ ಮತ್ತು ಆತನ ತಾಯಿ ದೈಹಿಕ ಹಲ್ಲೆ ಮಾಡಿದ್ದಾರೆ. ಜಾತಿ ನಿಂದನೆಯ ದೌರ್ಜನ್ಯ ಎಸಗಿದ್ದಾರೆ. ಈ ಪ್ರಕರಣ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಈ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರಿಗೆ ಪಾಲಿಕೆಯ ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದ ವಿಶೇಷ ಆಯುಕ್ತರು ಪತ್ರ ಬರೆದಿದ್ದರು.

‘ಆರೋಗ್ಯಕರ ಸಮಾಜದ ನಿರ್ಮಾಣದಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಮೂಲ್ಯವಾದದ್ದು. ಇಂತಹವರ ಮೇಲೆ ಹಲ್ಲೆ, ಜಾತಿ ನಿಂದನೆಯ ದೌರ್ಜನ್ಯ ಎಸಗಿರುವುದು ವಿಷಾದನೀಯ. ಆದ್ದರಿಂದ ಈ ಪ್ರಕರಣವನ್ನು ಆದ್ಯತೆ ಮೇರೆಗೆ ಪರಿಗಣಿಸಿ, ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಂಡು, ನಮ್ಮ ಪೌರಕಾರ್ಮಿಕರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು’ ಎಂದು ಪತ್ರದಲ್ಲಿ ತುಷಾರ್‌ ಗಿರಿನಾಥ್‌ ಮನವಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT