ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನನ್ನು ನಗ್ನಗೊಳಿಸಿ, ಹಲ್ಲೆ ನಡೆಸಿದ್ದು ಆರೋಪಿಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

‘ತಿಂಗಳ ಹಿಂದೆ ನಡೆದ ಘಟನೆ ಇದು ಎನ್ನಲಾಗಿದೆ. ಆರೋಪಿ, ಹಲ್ಲೆ ನಡೆಸಿ ವಿಡಿಯೊ ಚಿತ್ರೀಕರಿಸಿರುವ ಮಾಹಿತಿ ಸಿಕ್ಕಿದೆ. ಆ ವಿಡಿಯೊವನ್ನು ಭಾನುವಾರ ರಾತ್ರಿ ಆರೋಪಿಯ ಸಹಚರರು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದಾರೆ. ಮುಖದ ಮೇಲೆ ರಕ್ತ ಬರುವಂತೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಒಳಗಾದ ಯುವಕ ಪ್ರಾಣ ಉಳಿಸಿಕೊಳ್ಳಲು ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ರಾಜಗೋಪಾಲನಗರದ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಎಂಬಾತನೇ ಯುವಕನ ಮೇಲೆ ಹಲ್ಲೆ ನಡೆಸಿ ನಗ್ನಗೊಳಿಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಸುಂಕದಕಟ್ಟೆ ಬಳಿ ಹಲ್ಲೆ ನಡೆಸಲಾಗಿದೆ. ಯಾವ ಕಾರಣಕ್ಕೆ ಈ ರೀತಿ ವಿಕೃತಿ ತೋರಲಾಗಿದೆ ಎಂಬುದು ಗೊತ್ತಿಲ್ಲ. ಆರೋಪಿ ಬಂಧನದ ಬಳಿಕ ಕಾರಣ ತಿಳಿಯಲಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.