ಬೆಂಗಳೂರು: ಭಾರತೀಯ ವೈದ್ಯಕೀಯ ಪದ್ಧತಿಗಳನ್ನು ಅಭ್ಯಾಸ ಮಾಡಿದವರ ಮೇಲೆ ನಕಲಿ ವೈದ್ಯರೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿರುವುದನ್ನು ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ಎನ್‌ಇಎಂಎ) ಖಂಡಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿದ್ಧಪ್ಪ ಮಾಗರಿ, ‘ವೈದ್ಯಕೀಯ ವೃತ್ತಿ ನಡೆಸಲು ಅಗತ್ಯ ವಿದ್ಯಾರ್ಹತೆ ಪಡೆದು ರಾಜ್ಯದಾದ್ಯಂತ 40 ಸಾವಿರಕ್ಕೂ ಹೆಚ್ಚು ವೈದ್ಯರು ಕೆಲಸ ಮಾಡುತ್ತಿದ್ದಾರೆ. ನಮ್ಮ ಎಲ್ಲ ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ) ನೋಂದಣಿ ಮಾಡಿಕೊಂಡಿವೆ. ಆದರೂ, ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ವೈದ್ಯರು ಎಂದು ಕಿರುಕುಳ ನೀಡಿ, ನಮ್ಮ ಕ್ಲಿನಿಕ್‌ಗಳ ಮೇಲೆ ದಾಳಿ ಮಾಡುತ್ತಿದ್ದಾರೆ’ ಎಂದು ದೂರಿದರು.

‘ದೇಶದ ಎಲ್ಲ ವಿಶ್ವವಿದ್ಯಾಲಯಗಳು ಮಾನ್ಯ ಮಾಡಿರುವ ಪದವಿಯನ್ನು ಎನ್‌ಇಎಂಎ ಭಾರತೀಯ ವೈದ್ಯಕೀಯ ಪದ್ಧತಿಗಳ ವೈದ್ಯರಿಗೆ ಪ್ರದಾನ ಮಾಡುತ್ತಿದೆ. ವೈದ್ಯರು ತಾವು ಪಡೆದಿರುವ ಪದವಿಗಳ ಆಧಾರದ ಜೊತೆಗೆ ತರಬೇತಿ ಆಧರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ದರಿಂದ, ಆರೋಗ್ಯ ಇಲಾಖೆ ನಕಲಿ ವೈದ್ಯರೆಂದು ದಾಳಿ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ರಾಜ್ಯಪಾಲ ಥಾವರಚಂದ್ ಗೆಹಲೋತ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

ಅಸೋಸಿಯೇಷನ್ ಕಾನೂನು ಸಲಹೆಗಾರ ಎಂ.ಬಿ. ಗುರುರಾಜ್, ಪ್ರಧಾನ ಕಾರ್ಯದರ್ಶಿ ಡಾ. ಬಾಬು ಮೆನನ್, ಬೆಂಗಳೂರು ಘಟಕದ ಅಧ್ಯಕ್ಷ ಶಿವಕುಮಾರ್ ಪಾಲಭಾಮಟ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.