ಬೆಂಗಳೂರು: ನಗರದ ಬಿಜಿಎಸ್ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಇಬ್ಬರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ನಾಗರಬಾವಿಯ ಪ್ರಶಾಂತ್ (39) ಹಾಗೂ ಬ್ಯಾಡರಹಳ್ಳಿಯ ವೆಂಕಟೇಶ್ (32) ಬಂಧಿತರು.

'ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳ ಸಂಬಂಧಿಯೊಬ್ಬರು ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು' ಎಂದು ಪೊಲೀಸರು ತಿಳಿಸಿದರು.

'ಸಂಬಂಧಿಯನ್ನು ನೋಡಲು ವಾರ್ಡ್‌ನೊಳಗೆ ಬಿಡುವಂತೆ ಒತ್ತಾಯಿಸಿದ್ದ ಆರೋಪಿಗಳು, ಭದ್ರತಾ ಸಿಬ್ಬಂದಿ ಜೊತೆ ಜಗಳ ತೆಗದಿದ್ದರು. ಇದೇ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಪ್ರಶ್ನಿಸಲು ಬಂದ ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಆಸ್ಪತ್ರೆ ಆಸ್ತಿಗೂ ಹಾನಿ ಮಾಡಿದ್ದಾರೆ' ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.