ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ದಿವ್ಯಶ್ರೀ (26) ಅವರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಪತಿ ಜಯಪ್ರಕಾಶ್ (32) ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಸುಂಕದಕಟ್ಟೆಯಲ್ಲಿ ಫೆ.15ರಂದು ನಡೆದಿರುವ ಘಟನೆ ಸಂಬಂಧ ದಿವ್ಯಶ್ರೀ ಅವರು ದೂರು ನೀಡಿದ್ದಾರೆ. ಕೊಲೆ ಯತ್ನ ಆರೋಪದಡಿ ಜಯಪ್ರಕಾಶ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಜಯಪ್ರಕಾಶ್ ಹಾಗೂ ದಿವ್ಯಶ್ರೀ ಪರಸ್ಪರ ಪ್ರೀತಿಸಿ 2019ರಲ್ಲಿ ಮದುವೆಯಾಗಿದ್ದರು. ಇವರ ಮದುವೆಗೆ ಕುಟುಂಬದವರ ವಿರೋಧವಿತ್ತು. ಮೂಡಲಪಾಳ್ಯದಲ್ಲಿ ವಾಸವಿದ್ದ ದಂಪತಿ, ಕೇಟರಿಂಗ್ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಸುಂಕದಕಟ್ಟೆಯ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿದ್ದರು’ ಎಂದು ತಿಳಿಸಿದರು.

ಆರತಕ್ಷತೆ ಜಗಳ: ‘ಮದುವೆಯಾದ ಆರಂಭದಲ್ಲಿ ದಂಪತಿ ಚೆನ್ನಾಗಿದ್ದರು. ಕೆಲದಿನಗಳಿಂದ ದಂಪತಿ ನಡುವೆ ನಿತ್ಯವೂ ಜಗಳ ಆಗುತ್ತಿತ್ತು. ಈ ಬಗ್ಗೆ ಸ್ಥಳೀಯರು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಜಯಪ್ರಕಾಶ್ ಅವರ ತಂಗಿಗೆ ಮದುವೆ ನಿಶ್ಚಯವಾಗಿತ್ತು. ಇತ್ತೀಚೆಗೆ ಹಮ್ಮಿಕೊಂಡಿದ್ದ ಆರತಕ್ಷತೆ ಕಾರ್ಯಕ್ರಮಕ್ಕೆ ಬರಲು ದಿವ್ಯಶ್ರೀ ನಿರಾಕರಿಸಿದ್ದರು. ಇದೇ ಕಾರಣಕ್ಕೆ ಮನೆಯಲ್ಲಿ ಗಲಾಟೆ ಶುರುವಾಗಿತ್ತು.’

‘ತಮ್ಮ ಮನೆಯ ಕಾರ್ಯಕ್ರಮಗಳಿಗೆ ಬರುವುದಿಲ್ಲವೆಂದು ಸಿಟ್ಟಾಗಿದ್ದ ಜಯಪ್ರಕಾಶ್, ಪತ್ನಿ ಮೇಲೆ ಹಲ್ಲೆ ಮಾಡಿದ್ದ. ಚಾಕುವಿನಿಂದ ಕಾಲಿಗೆ ಇರಿದಿದ್ದ. ತೀವ್ರ ಗಾಯಗೊಂಡಿದ್ದ ದಿವ್ಯಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.