ಬೆಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದ ಸುದ್ದಿ ತಿಳಿದ 20 ನಿಮಿಷದಲ್ಲಿ ಪೊಲೀಸರು ಅವರನ್ನು ಪತ್ತೆ ಮಾಡಿ ರಕ್ಷಣೆ ಮಾಡಿರುವ ಘಟನೆ ಯಲಹಂಕದಲ್ಲಿ ಗುರುವಾರ ರಾತ್ರಿ ನಡೆದಿದೆ.

ಯಲಹಂಕ ತಾಲ್ಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲ್ (27) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದರು. ಎಎಸ್ಐ ನಾಗೇಶ್ ಮತ್ತು ಕಾನ್ಸ್ಟೆಬಲ್ ಸಂಜೀವ್ ಕುಮಾರ್ ಅವರು ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದಾರೆ. ರಕ್ಷಣೆ ವೇಳೆ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.

ಅದ್ದಿಗಾನಹಳ್ಳಿಯ ನಿವಾಸಿ ಗೋಪಾಲ್ ಅವರು ತನ್ನ ತಂಗಿಗೆ ಕರೆ ಮಾಡಿ ಆತ್ಮಹತ್ಯೆ ಮಾಡುಕೊಳ್ಳುತ್ತಿರುವುದಾಗಿ ಹೇಳಿದ್ದರು. ತಕ್ಷಣವೇ ತಂಗಿ 112 ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ರಾಜಾನುಕುಂಟೆ ಪೊಲೀಸರು, ಗೋಪಾಲ್ ಅವರ ಲೊಕೇಶನ್ ಪತ್ತೆ ಮಾಡಿ ಸ್ಥಳಕ್ಕೆ ಹೋಗಿದ್ದಾರೆ. ಪೊಲೀಸರನ್ನು ಕಂಡ ಕೂಡಲೇ ಗೋಪಾಲ್ ಅವರು ರೈಲ್ವೆ ಹಳಿ ಮೇಲೆ ಓಡಲು ಪ್ರಾರಂಭಿಸಿದ್ದಾರೆ. ಅವರನ್ನು ಬೆನ್ನತ್ತಿದ ಪೊಲೀಸರು, ಆತ್ಮಹತ್ಯೆ ಯತ್ನವನ್ನು ತಡೆದಿದ್ದಾರೆ.

ಗೋಪಾಲ್ ಅವರನ್ನು ಠಾಣೆಗೆ ಕರೆದುಕೊಂಡು ಬಂದು ಧೈರ್ಯ ಹೇಳಿ, ಕುಟುಂಬದ ಸದಸ್ಯರ ಜತೆ ಕಳುಹಿಸಿಕೊಟ್ಟಿದ್ದಾರೆ. ಪೊಲೀಸರ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.