ಬೆಂಗಳೂರು: ನಗರದಲ್ಲಿ ‘ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ’ ಯೋಜನೆಯ ಅಡಿ ಕಳೆದ ಎರಡು ವರ್ಷಗಳಲ್ಲಿ 1.75 ಲಕ್ಷ ಮಂದಿಗೆ ಚಿಕಿತ್ಸೆ ಒದಗಿಸಲಾಗಿದೆ. ಹೊರ ರಾಜ್ಯದವರೂ ಯೋಜನೆಯಡಿ ಇಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

2018ರಲ್ಲಿ ಆರಂಭವಾದ ಈ ಯೋಜನೆಯ ಅಡಿ ಬಿಪಿಎಲ್ ಕುಟುಂಬ
ದವರಿಗೆ ವರ್ಷಕ್ಕೆ ₹5 ಲಕ್ಷದವರೆಗೆ ಆರೋಗ್ಯ ವಿಮೆಗೆ ಅವಕಾಶವಿದೆ. ರಾಜ್ಯದಲ್ಲಿ 62.09 ಲಕ್ಷ ಕುಟುಂಬಗಳು ‘ಆಯುಷ್ಮಾನ್ ಭಾರತ್’ ಯೋಜನೆ ಅಡಿ ಬರಲಿವೆ. ಉಳಿದ ಕುಟುಂಬಗಳನ್ನು ‘ಆರೋಗ್ಯ ಕರ್ನಾಟಕ’ ಯೋಜನೆಯ ಅಡಿ ಸೇರ್ಪಡೆ ಮಾಡಲಾಗಿದೆ. ಎಪಿಎಲ್ ಕುಟುಂಬದ ಸದಸ್ಯರಿಗೆ ಗರಿಷ್ಠ ₹1.50 ಲಕ್ಷ ಚಿಕಿತ್ಸಾ ವೆಚ್ಚ ನಿಗದಿ ಮಾಡಿದ್ದು, ಶೇ 30ರಷ್ಟು ಹಣವನ್ನು ಪಾವತಿ
ಸಲಾಗುತ್ತದೆ. ಪ್ರಮುಖ ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಇಲ್ಲಿ ಇರುವುದರಿಂದ ಈ ಯೋಜನೆಯ ಅಡಿ ಈ ಚಿಕಿತ್ಸೆ ಪಡೆಯಲು ನಗರಕ್ಕೆ ಬರುವವರ ಸಂಖ್ಯೆ ಏರಿಕೆಯಾಗುತ್ತಿದೆ.

ರಾಜ್ಯದಲ್ಲಿನ 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಯೋಜನೆಗೆ ಒಳಪಟ್ಟಿವೆ. ಇಲ್ಲಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್ಜೆಐಸಿಆರ್), ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಹಾಗೂ ನಿಮ್ಹಾನ್ಸ್ ಸಂಸ್ಥೆಯು ಯೋಜನೆಯಡಿ ಅಧಿಕ ಮಂದಿಗೆ ಚಿಕಿತ್ಸೆ ಒದಗಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮೊದಲ ಐದು ಸ್ಥಾನಗಳಲ್ಲಿವೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಹೆಚ್ಚಿನವರು ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಿದ್ವಾಯಿ ಸಂಸ್ಥೆಯಲ್ಲಿ ಪ್ರತಿ ವರ್ಷ 10 ಸಾವಿರಕ್ಕೂ ಅಧಿಕ ಕ್ಯಾನ್ಸರ್ ಪೀಡಿತ ಒಳರೋಗಿಗಳಿಗೆ ಯೋಜನೆಯಡಿ ಚಿಕಿತ್ಸೆ ನೀಡಲಾಗುತ್ತಿದೆ.

ಖಾಸಗಿ ಆಸ್ಪತ್ರೆಗಳ ನಿರಾಸಕ್ತಿ: ಚಿಕಿತ್ಸಾ ಪ್ಯಾಕೇಜ್ ದರ ಕಡಿಮೆ ಎಂಬ ಕಾರಣಕ್ಕೆ ಶಿಫಾರಸು ಆಧಾರದಲ್ಲಿ ಬರುವ ರೋಗಿಗಳಿಗೆ ಯೋಜನೆಯ ಅಡಿ ಚಿಕಿತ್ಸೆ ಒದಗಿಸಲು ಖಾಸಗಿ ಆಸ್ಪತ್ರೆಗಳು ನಿರಾಸಕ್ತಿ ತೋರುತ್ತಿವೆ. ಮಂಡಿ ಚಿಪ್ಪು ಬದಲಾವಣೆಗೆ ₹1.50 ಲಕ್ಷ, ಹೃದಯದ ಕವಾಟ ಬದಲಿ ಶಸ್ತ್ರ
ಚಿಕಿತ್ಸೆಗೆ ₹1.55 ಲಕ್ಷ ಸೇರಿ ಯೋಜನೆಯ ಅಡಿ ವಿವಿಧ ಚಿಕಿತ್ಸೆಗಳಿಗೆ ನಿರ್ದಿಷ್ಟ ಮೊತ್ತ ನಿಗದಿಪಡಿಸಲಾಗಿದೆ. ಇಷ್ಟೇ ಮೊತ್ತದಲ್ಲಿ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ನಿಯಮ ರೂಪಿಸಿರುವುದು ಖಾಸಗಿ ಆಸ್ಪತ್ರೆಗಳ ಆಕ್ಷೇಪಕ್ಕೆ ಕಾರಣವಾಗಿದೆ. ಯೋಜನೆಯ ಅಡಿ ನಗರದಲ್ಲಿ ಚಿಕಿತ್ಸೆ ಒದಗಿಸಲಾದ ಪ್ರಕರಣಗಳಲ್ಲಿ ಶೇಕಡ 80ಕ್ಕೂ ಅಧಿಕ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ.

‘ಯೋಜನೆಯ ಅಡಿ ಸರ್ಕಾರಿ ಆಸ್ಪತ್ರೆ
ಗಳಿಗೂ ಚಿಕಿತ್ಸೆಗೆ ಅನುಸಾರ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಹಣ ಬಿಡುಗಡೆ ಮಾಡುತ್ತಿದೆ. ಈ ಹಣವನ್ನು ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಪ್ರೋತ್ಸಾಹ ಧನ ಒದಗಿಸಲು ಬಳಸಿಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ನೋಂದಣಿ ಹೆಚ್ಚಿಸಲು ಕ್ರಮವಹಿಸಲಾಗಿದೆ. ಎಲ್ಲ ಅರ್ಹ ಫಲಾನುಭವಿಗಳು ಚಿಕಿತ್ಸೆ ಪಡೆಯು ವಂತಾಗಲು ಸಾರ್ವಜನಿಕ ಆಸ್ಪತ್ರೆ
ಗಳಲ್ಲಿ ಕಿಯೋಸ್ಕ್ಗಳನ್ನು ಸ್ಥಾಪಿಸ
ಲಾಗುತ್ತಿದೆ’ ಎಂದು ಇಲಾಖೆಯ ಅಧಿಕಾರಿ
ಯೊಬ್ಬರು ತಿಳಿಸಿದರು.

ಹೊರ ರಾಜ್ಯದ 4,976 ಮಂದಿಗೆ ಚಿಕಿತ್ಸೆ

‘ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ’ಯಡಿ ಹೊರ ರಾಜ್ಯದವರಿಗೂ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದೆ. ಯೋಜನೆಯ ಕಾರ್ಡ್ ಹೊಂದಿದ್ದಲ್ಲಿ ಸುಲಭವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. 2021–22ರಲ್ಲಿ ಯೋಜನೆಯಡಿ 4,936 ಮಂದಿಗೆ ಹಾಗೂ 2022–23ರಲ್ಲಿ 40 ಮಂದಿಗೆ ಕೋವಿಡ್ ಚಿಕಿತ್ಸೆ ಒದಗಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.