ಬೆಂಗಳೂರು: ‘ಜನೌಷಧಿ ಮಳಿಗೆಗಳಲ್ಲಿನ ಔಷಧಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಔಷಧ ನಿಯಂತ್ರಕರಿಂದ ಸೂಕ್ತ ತಪಾಸಣೆಗೆ ಒಳಪಡುತ್ತಿವೆ. ಇದರಿಂದಾಗಿ ಕೇಂದ್ರ ಸರ್ಕಾರ ಆರೋಗ್ಯ ವಲಯದಲ್ಲಿ ಅತ್ಯುತ್ತಮ ಸೇವೆ ಒದಗಿಸುತ್ತಿದೆ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದರು.

ಭಾರತೀಯ ಔಷಧ ಮತ್ತು ವೈದ್ಯಕೀಯ ಸಾಧನಗಳ ಬ್ಯೂರೋ (ಪಿಎಂಬಿಐ) ವತಿಯಿಂದ ಬಸವನಗುಡಿಯಲ್ಲಿ ಭಾನುವಾರ ಆಯೋಜಿಸಿದ್ದಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜನೌಷಧಿ ಮಳಿಗೆ ಕಾರ್ಯಕ್ರಮದಡಿ ಜನರಿಗೆ ಅಗತ್ಯ ಔಷಧಿಗಳು ಸೂಕ್ತ ರೀತಿಯಲ್ಲಿ ತಲುಪುತ್ತಿದೆ. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ತಿಂಗಳಿಗೆ ಕನಿಷ್ಠ ₹4 ಸಾವಿರ ಬೆಲೆಯ ಔಷಧ ಅಗತ್ಯ. ಆದರೆ, ಜನೌಷಧಿ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಔಷಧಗಳು ಲಭ್ಯವಾಗುತ್ತಿವೆ. ದೇಶದಲ್ಲಿ ಪ್ರಸ್ತುತ ಎಂಟು ಸಾವಿರಕ್ಕೂ ಹೆಚ್ಚು ಮಳಿಗೆಗಳು ಕಾರ್ಯನಿರ್ವಹಿಸುತ್ತಿವೆ’ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‘ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ ಯೋಜನೆಗಳನ್ನು ಘೋಷಿಸುವುದಿಲ್ಲ. ಅದನ್ನು ಸೂಕ್ತ ರೀತಿಯಲ್ಲಿ ಜನರಿಗೆ ತಲುಪಿಸುವಂತೆ ಸೂಕ್ತ ಕಾರ್ಯ ಹಾಗೂ ಪ್ರಚಾರಕ್ಕೂ ಆದ್ಯತೆ ನೀಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ಶಾಸಕ ಎಲ್.ಎ.ರವಿ ಸುಬ್ರಹ್ಮಣ್ಯ, ಅದಮ್ಯ ಚೇತನ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ತೇಜಸ್ವಿನಿ ಅನಂತಕುಮಾರ್, ಪಿಎಂಬಿಐನ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥ್ ಗೌತಮ್ ಶರ್ಮ ಹಾಗೂ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.