ಬೆಂಗಳೂರು: ಇ–ಸಿಗರೇಟ್ ಮತ್ತು ವೇಪಿಂಗ್ ಉತ್ಪನ್ನಗಳನ್ನು ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದೆ.

ಈ ಕುರಿತು ಸಚಿವರಿಗೆ ಪತ್ರ ಬರೆದಿರುವ ಸಂಘವು, ‘ಭಾರತದಲ್ಲಿ ಇ–ಸಿಗರೇಟ್ ವ್ಯಾಪಾರ ಬೆಳೆಯಲು ಪ್ರೋತ್ಸಾಹ ನೀಡುವುದು ದೇಶದ ತಂಬಾಕು ಬೆಳೆಗಾರರ ಮೇಲೆ ಗದಾಪ್ರಹಾರ ಮಾಡಿದಂತಾಗುತ್ತದೆ’ ಎಂದಿದೆ.

‘ಈ ಉತ್ಪನ್ನಗಳನ್ನು ನಿಷೇಧಿಸಿದರೆ ರೈತರಿಗೆ ನಷ್ಟವಾಗುತ್ತದೆ ಎಂದು ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತದೆ. ಇದು ಸಂಪೂರ್ಣ ತಪ್ಪು. ಬಹುರಾಷ್ಟ್ರೀಯ ಕಂಪನಿಗಳ ಲಾಭಕ್ಕಾಗಿ ಕೆಲಸ ಮಾಡುತ್ತಿರುವ ಕೆಲವೇ ಜನರ ಗುಂಪಿನ ಮನವಿ ಸ್ವೀಕರಿಸಬಾರದು’ ಎಂದೂ ಸಂಘವು ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.