ಬೆಂಗಳೂರು: ಕರ್ತವ್ಯ ನಿರತ ಸಂಚಾರ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಉತ್ತರ ಭಾರತದ ನಿವಾಸಿ ಸೋನಮ್ ಎಂಬುವರನ್ನು ಕಾನ್ಸ್ಟೆಬಲ್ ಪ್ರಶ್ನಿಸಿದ್ದಾರೆ. ಈ ವಿಚಾರಕ್ಕೆ ಮಹಿಳೆ ಸಂಘರ್ಷಕ್ಕಿಳಿದು, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು, ಸಮವಸ್ತ್ರದ ಕಾಲರ್ ಪಟ್ಟಿ ಹಿಡಿದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇಂದಿರಾನಗರದಲ್ಲಿ ನಡೆದ ಈ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಫೋನ್ನಲ್ಲಿ ಸೆರೆ ಹಿಡಿದಿದ್ದಾರೆ. ಪೊಲೀಸ್ ಮೇಲೆ ಮಹಿಳೆ ಹಲ್ಲೆ ನಡೆಸುವ ಸಂದರ್ಭದಲ್ಲಿ ಇಬ್ಬರು ಪೊಲೀಸರು ಹಾಗೂ ಒಂದು ಹೊಯ್ಸಳ ವಾಹನ ಸಹ ಇದೆ. ಆದರೆ ಪೊಲೀಸರು ಮಹಿಳೆಯನ್ನು ತಡೆಯಲು ಯತ್ನಿಸಿಲ್ಲ.

‘ಸೋನಮ್ ಅವರು ಉದ್ಯೋಗದ ನಿಮಿತ್ತ ನಗರದಲ್ಲಿ ವಾಸಿಸುತ್ತಿದ್ದಾರೆ. ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ನಡೆಸಿದ ಅವರನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಜೆ.ಪಿ.ನಗರ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.