ಬೆಂಗಳೂರು: ಅಪಘಾತಗಳ ನಿಯಂತ್ರಣಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನೈಸ್ ರಸ್ತೆಯಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.

ಕೆಂಗೇರಿ, ಕಾಮಾಕ್ಷಿಪಾಳ್ಯ, ಜ್ಞಾನಭಾರತಿ ಮತ್ತು ಬ್ಯಾಟರಾಯನಪುರ, ತಲಘಟ್ಟಪುರ, ಕೆ.ಎಸ್.ಲೇಔಟ್, ಹುಳಿಮಾವು ಹಾಗೂ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅಜಾಗರೂಕತೆ, ನಿರ್ಲಕ್ಷ್ಯತೆಯ ಚಾಲನೆಯಿಂದ ಅಪಘಾತಗಳು ಪ್ರಕರಣಗಳು ಹೆಚ್ಚುತ್ತಿವೆ.

ಪ್ರತಿ ವರ್ಷವೂ ಅಪಘಾತದಲ್ಲಿ ಗಾಯಗೊಂಡು, ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ವೇಗದ ಮಿತಿ ಎಚ್ಚರಿಕೆಯ ಫಲಕಗಳನ್ನು ಅಳವಡಿಸಲಾಗಿದೆ. ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಹಲವು ಸುಧಾರಣಾ ಕ್ರಮ ಕೈಗೊಂಡಿದ್ದರೂ ಸಾವು–ನೋವು ಹೆಚ್ಚುತ್ತಲೇ ಇದೆ ಎಂದು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಕಮಿಷನರ್ ಅವರಿಗೆ ವರದಿ ಸಲ್ಲಿಸಿದ್ದರು.

ಈ ರಸ್ತೆಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸಿರುವುದು ಅತಿವೇಗ ಹಾಗೂ ಅಜಾಗರೂಕತೆ ಕಾರಣ ಎಂಬುದನ್ನು ವಿಶ್ಲೇಷಿಸಲಾಗಿದೆ. ವಾಹನ ಸವಾರರು ಸಂಚಾರ ನಿಯಮ ಪಾಲಿಸದಿರುವುದು ಸಹ ಕಂಡು ಬಂದಿದೆ. ಹಾಗಾಗಿ ಈ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿ ಚಕ್ರ ವಾಹನ ಸಂಚಾರ ನಿಷೇಧಿಸುವಂತೆ ಠಾಣಾಧಿಕಾರಿಗಳು ಮನವಿ ಮಾಡಿದ್ದರು.

ವೇಗದ ಮಿತಿ ವಿವರ:

ಎಂಟು ಪ್ರಯಾಣಿಕರನ್ನು ಕರೆದೊಯ್ಯುವ ವಾಹನದ ವೇಗದ ಮಿತಿ ಗಂಟೆಗೆ 120 ಕಿ.ಮೀ, 9 ಹಾಗೂ ಅದಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯವ ವಾಹನಗಳು 100 ಕಿ.ಮೀ ಹಾಗೂ ಎಲ್ಲಾ ತರಹದ ಗೂಡ್ಸ್ ವಾಹನಗಳು ಹಾಗೂ ದ್ವಿ ಚಕ್ರ ವಾಹನಗಳ ವೇಗದ ಮಿತಿಯನ್ನು 80 ಕಿ.ಮೀ.ಗೆ ನಿಗದಿ ಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.