ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ: ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ

Published : 9 ನವೆಂಬರ್ 2022, 19:31 IST
ಫಾಲೋ ಮಾಡಿ
Comments

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ನಗರಕ್ಕೆ ಆಗಮಿಸಲಿದ್ದು, ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.

‘ವಿಧಾನಸೌಧ, ರೈಲು ನಿಲ್ದಾಣ ಹಾಗೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಕ್ರಮಗಳಲ್ಲಿ ಪ್ರಧಾನ ಮಂತ್ರಿ ಪಾಲ್ಗೊಳ್ಳಲಿದ್ದಾರೆ. ಅವರ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು. ‍ಪ್ರತಿಯೊಂದು ರಸ್ತೆಯಲ್ಲೂ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬೆಳಿಗ್ಗೆ 7ರಿಂದ ಮಧ್ಯಾಹ್ನ 3 ಗಂಟೆವರೆಗೆ ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹಲವೆಡೆ ದಟ್ಟಣೆ ಉಂಟಾಗುವ ಸಾಧ್ಯತೆಯೂ ಇದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT