ಬೆಂಗಳೂರು: ‘ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ–2024 ಇದೇ 19ರಿಂದ 21ರವರೆಗೆ ನಡೆಯಲಿದೆ’ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

‘ಆಸ್ಟ್ರೇಲಿಯ, ಬ್ರಿಟನ್, ಫ್ರಾನ್ಸ್, ಆಸ್ಟ್ರಿಯ, ಡೆನ್ಮಾರ್ಕ್, ಫಿನ್ಲೆಂಡ್, ಪೋಲೆಂಡ್, ಜಪಾನ್, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್ ಮತ್ತು ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಈ ದೇಶಗಳ ನಿಯೋಗಗಳು ಭಾಗಿಯಾಗಲಿವೆ’ ಎಂದು ಅವರು ಮಾಹಿತಿ ನೀಡಿದರು.

‘ಉದ್ಘಾಟನಾ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ತಿಳಿಸಿದರು.

118 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ನವೋದ್ಯಮಗಳು

50 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಜಾಗತಿಕ ಹೂಡಿಕೆದಾರರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.